ರಾಯಚೂರು: ಇಟಲಿಯಿಂದ ನಗರಕ್ಕೆ ಮರಳಿದ್ದ ವ್ಯಕ್ತಿಯ ಮಾದರಿ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟಿವ್ ಬಂದಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದ ನಿಜಲಿಂಗಪ್ಪ ಕಾಲೋನಿಯ ನಿವಾಸಿಯನ್ನು ಶಂಕೆಯ ಮೆರೆಗೆ ರಿಮ್ಸ್ ಆಸ್ಪತ್ರೆಯ ಕೊರೊನಾ ವಿಶೇಷ ವಾರ್ಡ್‍ನಲ್ಲಿ ದಾಖಲಿಸಲಾಗಿತ್ತು. ಗಂಟಲ ದ್ರವ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಇಲ್ಲದಿರುವುದು ಧೃಡಪಟ್ಟಿದೆ.
Advertisement
Advertisement
ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಐದು ದಿನಗಳಿಂದ ರಿಮ್ಸ್‌ಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ದಾಖಲಾಗಿರುವ ಇನ್ನೂ ಇಬ್ಬರ ವರದಿ ಇಂದು ಸಂಜೆಯೊಳಗೆ ಬರುವ ನೀರಿಕ್ಷೆ. ರಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು ಮೂರು ಜನರನ್ನು ಸಂಶಯದ ಮೆರೆಗೆ ದಾಖಲಿಸಲಾಗಿದೆ. ವಿದೇಶದಿಂದ ಮರಳಿದ ಜಿಲ್ಲೆಯ 28 ಜನರ ಮೇಲೆ ನಿಗಾ ಇಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ.