Connect with us

Crime

ರೆಸಾರ್ಟ್‍ನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಪಾರ್ಟಿ – 150ಕ್ಕೂ ಹೆಚ್ಚು ಜನ ಪೊಲೀಸ್ ವಶಕ್ಕೆ

Published

on

ಹಾಸನ: ಖಾಸಗಿ ರೆಸಾರ್ಟ್ ಮೇಲೆ ಪೊಲೀಸರ ದಾಳಿ ನಡೆಸಿ ಕೊರೊನಾ ನಿಯಮ ಮೀರಿ ಪಾರ್ಟಿಯಲ್ಲಿ ಭಾಗವಹಿಸಿದ್ದ 150 ಕ್ಕೂ ಹೆಚ್ಚು ಜನ ವಶಕ್ಕೆ ಪಡೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಲವೆಡೆ ಖಾಸಗಿ ರೆಸಾರ್ಟ್ ಮೇಲೆ ದಾಳಿ ನಡೆಸಿದ ಎಸ್‍ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ರೆಸಾರ್ಟ್‍ನಲ್ಲಿ ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ಒಂದು ಕಡೆ ಹಾಸನದಲ್ಲಿ ಕೊರೊನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಮತ್ತೊಂದು ಕಡೆ ನಿಯಮ ಮೀರಿ ಖಾಸಗಿ ರೆಸಾರ್ಟ್‍ನಲ್ಲಿ ಪಾರ್ಟಿ ನಡೆಸುತ್ತಿದ್ದಾರೆ. ಸುಮಾರು 150 ಜನ ಯುವಕ ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಸನ ಜಿಲ್ಲೆಯ ಆಲೂರು, ಸಕಲೇಶಪುರ ಭಾಗದಲ್ಲಿ ಖಾಸಗಿ ರೆಸಾರ್ಟ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ರಜಾ ದಿನಗಳಲ್ಲಿ ಬೆಂಗಳೂರು ನಗರ ಸೇರಿದಂತೆ ಹಲವೆಡೆಯಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಅವರಲ್ಲಿ ಕೆಲವರು ನಿಯಮಮೀರಿ ಪಾರ್ಟಿ ನಡೆಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಎರಡನೇ ಅಲೆ ಕೊರೊನ ಭೀತಿ ಹೆಚ್ಚಾಗಿತ್ತು. ಈ ನಡುವೆ ರೆಸಾರ್ಟ್‍ಗಳಲ್ಲಿ ನಿಯಮ ಮೀರಿ ನಡೆಯುವ ಪಾರ್ಟಿಗಳ ಬಗ್ಗೆಯೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ ರೆಸಾರ್ಟ್‍ಗಳ ಮೇಲೆ ದಾಳಿ ಮಾಡಿದ ಎಸ್‍ಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಯುವಕ, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

Click to comment

Leave a Reply

Your email address will not be published. Required fields are marked *