ಚಾಮರಾಜನಗರ: ಕೊರೊನಾ ಮೂರನೇ ಅಲೆ ಭೀತಿಗೆ ಚಾಮರಾಜನಗರದ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಈ ವಿಚಾರವಾಗಿ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡುವವರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಕೊರೊನಾ ತಡೆಗೆ ಮಾಸ್ಕ್ ಜಾಗೃತಿ ಅಭಿಯಾನವನ್ನು ಇಬ್ಬರು ಮಹಿಳಾ ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಸ್ವತಃ ಮಹಿಳಾ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮತ್ತು ಎಸ್‍ಪಿ ದಿವ್ಯಾ ಸಾರಾಥಾಮಸ್ ಫೀಲ್ಡಿಗಿಳಿದ್ದಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್
Advertisement
Advertisement
ಮಾಸ್ಕ್ ಧರಿಸದೇ ಇದ್ದವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ. ಕೊರೊನಾ ಸೋಂಕು ತಡೆಗಟ್ಟಲು ಜನರ ಸಹಕಾರ ಅತ್ಯಗತ್ಯ. ಜಿಲ್ಲೆಯಲ್ಲಿ ಪ್ರತಿದಿನ 2,200 ಜನರ ಕೊರೊನಾ ಟೆಸ್ಟ್ ಮಾಡಲು ಸರ್ಕಾರ ಗುರಿ ನೀಡಿದೆ. ಜಿಲ್ಲೆಯಲ್ಲಿ ಮೊದಲ ಡೋಸ್ ವ್ಯಾಕ್ಸಿನೇಷನ್ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದ್ದಾರೆ.
Advertisement
Advertisement
ಮೊದಲ ಡೋಸ್ ಶೇ.98 ಮತ್ತು ಎರಡನೇ ಡೋಸ್ ಶೇ.77 ರಷ್ಟು ಜನರಿಗೆ ನೀಡಲಾಗಿದೆ. 2ನೇ ಡೋಸ್ ಅನ್ನು ಆದಷ್ಟು ವೇಗವಾಗಿ ಮುಗಿಸುವ ನಿರ್ಧಾರ ಹೊಂದಿದ್ದೇವೆ. ಈಗಾಗಲೇ ಜಿಲ್ಲೆಯ ಆಸ್ಪತ್ರೆಯಲ್ಲಿ 29,000 ಕಿಲೋ ಲೀಟರ್ ಆಕ್ಸಿಜನ್ ಇದೆ. ಮುಂದೆ ಆಕ್ಸಿಜನ್ ಕೊರತೆ ಎದುರಾಗದಂತೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ಅಗತ್ಯ ಇಲ್ಲ: ರಘುಪತಿ ಭಟ್