Connect with us

Corona

ದಾವಣಗೆರೆಯಲ್ಲಿ ಇಂದು 10 ಜನ ಡಿಸ್ಚಾರ್ಜ್

Published

on

– ಗುಣಮುಖವಾಗುತ್ತಿರುವವರ ಸಂಖ್ಯೆ ಹೆಚ್ಚಳ

ದಾವಣಗೆರೆ: ಜಿಲ್ಲೆಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದರಿಂದ ಜನ ತೀವ್ರ ಆತಂಕಕ್ಕೊಳಗಾಗಿದ್ದರು. ಆದರೆ ಇದೀಗ ಗುಣಮುಖವಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಒಂದೇ ದಿನ 10 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆಯಲ್ಲಿ ಇಂದು 10 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖವಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುತ್ತಿದ್ದಾರೆ. ಜಿಲ್ಲೆಯಲ್ಲಿ ಕಾಣಿಸಿಕೊಂಡ ಒಟ್ಟು 226 ಪಾಸಿಟಿವ್ ಪ್ರಕರಣ ಪೈಕಿ 194 ಜನ ಗುಣಮುಖರಾಗಿದ್ದು, ಪ್ರಸ್ತುತ 26 ಸಕ್ರಿಯ ಪ್ರಕರಣಗಳಿವೆ. ಈ ವರೆಗೆ ಮಹಾಮಾರಿ ಕೊರೊನಾಗೆ 6 ಜನ ಮೃತಪಟ್ಟಿದ್ದಾರೆ. ಇತ್ತೀಚೆಗೆ ಸೋಂಕಿತ ಪ್ರಕರಣಗಳು ಕಡಿಮೆಯಾಗಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.

ದಾವಣಗೆರೆಯಲ್ಲಿ ಶುಕ್ರವಾರ 9 ಪ್ರಕರಣಗಳು ಪತ್ತೆಯಾಗಿದ್ದರೆ, ಶನಿವಾರ 3 ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಯಾವುದೇ ಸೋಂಕಿತ ಪ್ರಕರಣಗಳು ಕಂಡುಬಂದಿಲ್ಲ. ಆದರೆ 10 ಜನ ಡಿಸ್ಚಾರ್ಜ್ ಆಗಿದ್ದಾರೆ. ಆರಂಭದಲ್ಲಿ ದಾವಣಗೆರೆಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಜನ ಭಯಭೀತರಾಗಿದ್ದರು.