ನವದೆಹಲಿ: ಜನ ಸಾಮಾನ್ಯರಿಗೆ, ಉದ್ಯೋಗಿಗಳಿಗೆ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ ಈಗ ವಿದ್ಯುತ್ ವಿನಾಯಿತಿಯನ್ನು ನೀಡಿದೆ.
ಮೂರು ತಿಂಗಳ ಕಾಲ ವಿದ್ಯುತ್ ಬಿಲ್ ಪಾವತಿಗೆ 3 ತಿಂಗಳು ವಿನಾಯಿತಿ ನೀಡಿ ರಾಜ್ಯ ಸರ್ಕಾರಗಳು ಎಲ್ಲ ಎಸ್ಕಾಂಗಳಿಗೆ ಸೂಚಿಸಬೇಕೆಂದು ಕೇಂದ್ರ ಇಂಧನ ಸಚಿವಾಲಯ ಆದೇಶಿಸಿದೆ.
Advertisement
ಲಾಕ್‍ಡೌನ್ ಅವಧಿಯಲ್ಲಿ ವ್ಯವಹಾರ ನಡೆಯದ ಕಾರಣ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಬೇಡಿಕೆ ವ್ಯಕ್ತವಾಗಿತ್ತು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆ ಮತ್ತು ಕಂಪನಿಗಳು ಬಂದ್ ಆಗಿರುವ ಕಾರಣ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ.
Advertisement
ಕೃಷಿ ಉತ್ಪನ್ನ ಸಾಗಾಟ, ಕೃಷಿಗೆ ಪೂರಕವಾಗಿರುವ ಸಂಸ್ಥೆಗಳ ವ್ಯವಹಾರಗಳಿಗೆ ಕೇಂದ್ರ ಸರ್ಕಾರ ವಿನಾಯಿತಿ ನೀಡಿದೆ.