ಲಕ್ನೋ: ಸಮಾಜವಾದಿ ಪಕ್ಷದ ಕಚೇರಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ 2,500 ಅನಾಮಧೇಯ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಸಚಿವರಾಗಿದ್ದ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ, ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳದ ಶಾಸಕರೊಬ್ಬರು ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ಎಸ್‌ಪಿಗೆ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಮಾಲ್‍ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಹಕ್ಕಿಲ್ಲ: ಕೇರಳ ಹೈಕೋರ್ಟ್
Advertisement
Advertisement
ಎಸ್‌ಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಈ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್ ಕಡ್ಡಾಯ
Advertisement
ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ನಡೆಯಲಿರುವ 5 ರಾಜ್ಯಗಳಲ್ಲಿ ಜ. 15 ರವರೆಗೆ ಸಾರ್ವಜನಿಕ ಮೆರವಣಿಗೆ, ಬಹಿರಂಗ ಸಭೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.