Connect with us

Corona

70 ಲಕ್ಷ ಗಡಿಯತ್ತ ಕೊರೊನಾ- ಲಕ್ಷಕ್ಕೂ ಅಧಿಕ ಜನ ಮಹಾಮಾರಿಗೆ ಬಲಿ

Published

on

– ಒಟ್ಟು 59.88 ಲಕ್ಷ ಜನ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ತಗ್ಗಿದೆ. ಇನ್ನೊಂದೆಡೆ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಸಹ ಹೆಚ್ಚುತ್ತಿದೆ. ಆದರೂ ಸಮಾಧಾನ ಪಟ್ಟುಕೊಳ್ಳುವಂತಿಲ್ಲ. ಇಂದು 73,272 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ 926 ಜನ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 73,272 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 926 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 69,79,424ಕ್ಕೆ ಏರಿಕೆಯಾಗಿದೆ. ಒಟ್ಟು 69,79,424 ಕೊರೊನಾ ಪ್ರಕರಣಗಳ ಪೈಕಿ, 8,83,185 ಸಕ್ರಿಯ ಪ್ರಕರಣಗಳಿವೆ. ಈವರೆಗೆ 59,88,823 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 1,07,416 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 11,64,018 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 8,57,98,698 ಜನನ್ನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂಬ ಐಸಿಎಂಆರ್ ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಒಂದೇ ದಿನ 1,019 ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 31,778ಕ್ಕೆ ಏರಿಕೆಯಾಗಿದೆ. ಒಂದೇ ದಿನ 31,586 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ ವಿವರಿಸಿದ್ದಾರೆ.

Click to comment

Leave a Reply

Your email address will not be published. Required fields are marked *