ನವದೆಹಲಿ: ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 173 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಈವರೆಗೆ ಸೋಂಕಿಗೆ 8,938 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 151ಕ್ಕೆ ಏರಿದ್ದು, ಕರ್ನಾಟಕದಲ್ಲಿ 14 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.
ಒಟ್ಟು 173 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 2,18,455 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,245 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 8,938 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 85,664 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,23,853 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
Advertisement
Advertisement
ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 169 ಮಂದಿ ತುತ್ತಾಗಿದ್ದು, 14 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 152 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಹಾಗೂ ದೆಹಲಿಯ ವೃದ್ಧೆಯೊಬ್ಬರು ಹಾಗೂ ಮಹಾರಾಷ್ಟ್ರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟು 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ಬುಧವಾರದವರೆಗೆ 44 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.
Advertisement
ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.
Advertisement
1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,928 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 70,420 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,245 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 7,263 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ.
2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 35,713 ಮಂದಿ ತುತ್ತಾಗಿದ್ದು, ಅವರಲ್ಲಿ 4,025 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 28,710 ಮಂದಿ ಕೊರೊನಾದಿಂದ ಬಳಲುತ್ತಿದ್ದು, 2,978 ಮಂದಿ ಮೃತಪಟ್ಟಿದ್ದಾರೆ.
3. ಇರಾನ್ – 17,361 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 5,710 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 10,516 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 1,135 ಸೋಂಕಿತರು ಸಾವನ್ನಪ್ಪಿದ್ದಾರೆ.
4. ಸ್ಪೇನ್ – 14,769 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 1,081 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 13,050 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 638 ಮಂದಿ ಬಲಿಯಾಗಿದ್ದಾರೆ.
5. ದಕ್ಷಿಣ ಕೊರಿಯಾ – 8,565 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 1,947 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 91 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,527 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
6. ಜರ್ಮನಿ – 12,327 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 105 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 28 ಮಂದಿ ಬಲಿಯಾಗಿದ್ದು, ಪ್ರಸ್ತುತ 12,195 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.
7. ಫ್ರಾನ್ಸ್ – 9,134 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 602 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 8,268 ಮಂದಿ ಸೋಂಕಿನಿಂದ ಬಳಲುತ್ತಿದ್ದು, 264 ಮಂದಿ ಜೀವ ಕಳೆದುಕೊಂಡಿದ್ದಾರೆ.
8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 154 ಮಂದಿ ಬಲಿಯಾಗಿದ್ದಾರೆ. 9,413 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 108 ಮಂದಿ ಗುಣಮುಖರಾಗಿದ್ದಾರೆ. ಸದ್ಯ 9,151 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.
9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲೂ ಹರಡಿರುವ ಕೊರೊನಾ ವೈರಸ್‍ಗೆ ಈವರೆಗೆ 307 ಮಂದಿ ತುತ್ತಾಗಿದ್ದು, 13 ಮಂದಿ ಚೇತರಿಸಿಕೊಂಡಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, 292 ಮಂದಿಗೆ ಸೋಂಕು ತಗುಲಿದೆ.