– 19 ಜನ ಹೋಮ್ ಕ್ವಾರಂಟೈನ್
ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಹಿನ್ನಲೆ, ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಕುಟುಂಬದವರು ಸೇರಿದಂತೆ ಒಟ್ಟು 19 ಜನರನ್ನು ಕೋಲಾರದಲ್ಲಿ ಹೋಮ್ ಕ್ವಾರಂಟೇನ್ ನಲ್ಲಿ ಇಡಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದು, ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಶಂಕೆ ವ್ಯಕ್ತವಾದ ಹಿನ್ನೆಲೆ ಪೊಲೀಸ್ ಕುಟುಂಬಕ್ಕೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಇನ್ಸ್‍ಪೆಕ್ಟರ್ ಕುಟುಂಬದ 9 ಜನ ಹಾಗೂ ಪಕ್ಕದ ಮನೆಯ ಹತ್ತು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
Advertisement
Advertisement
ಕ್ವಾರಂಟೈನ್ ನಲ್ಲಿರುವವರು ಚಿಕ್ಕಬಳ್ಳಾಪುರದಲ್ಲಿ ನಿಧನವಾದ ಸೋಂಕಿತ ವ್ಯಕ್ತಿಯ ಸಂಬಂಧಿಕರು ಎನ್ನಲಾಗಿದೆ. ಹೀಗಾಗಿ ಅವರ ರಕ್ತದ ಮಾದರಿ ಹಾಗೂ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಕೊರೊನಾ ಸೋಂಕಿತ ವ್ಯಕ್ತಿ, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಹಿನ್ನಲೆ ಅವರ ಸಂಬಂಧಿಕರು ಎನ್ನುವ ಕಾರಣಕ್ಕೆ ಕ್ವಾರಂಟೈನ್ ಮಾಡಲಾಗಿದೆ.