ಬೆಂಗಳೂರು: ಕೊರೊನಾ ವೈರಸ್‍ನಿಂದ ನಾಳೆಯಿಂದ ಒಂದು ವಾರದ ಅವಧಿಗೆ ರಾಜ್ಯಾದ್ಯಂತ ಮಾಲ್‍ಗಳು, ಚಿತ್ರಮಂದಿರಗಳು, ನೈಟ್ ಕ್ಲಬ್ ಮುಚ್ಚುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಆದರೆ ಎಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಕೊರೊನಾ ವೈರಸ್ ಸೋಂಕಿನಿಂದ ಕಲಬುರಗಿಯ ವ್ಯಕ್ತಿಯೊಬ್ಬರು ದುರದೃಷ್ಟವಶಾತ್ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಮತ್ತು ಡಾ. ದೇವಿ ಶೆಟ್ಟಿ ಹಾಗೂ ವಿವಿಧ ವೈದ್ಯಕೀಯ ಸಂಘಟನೆಗಳೊಂದಿಗೆ ಸಭೆ ನಡೆಸಿದ ನಂತರ ಮುಖ್ಯಮಂತ್ರಿಗಳು ಈ ನಿರ್ಧಾರವನ್ನು ಪ್ರಕಟಿಸಿದರು. ಇದನ್ನೂ ಓದಿ: ಮದ್ವೆ ನಿಗದಿಯಾದ್ರೆ ಏನು ಕಥೆ? ಯಾವುದೆಲ್ಲ ಬಂದ್? ಇಲ್ಲಿದೆ ಪೂರ್ಣ ವಿವರ
Advertisement
Advertisement
ವಿಶ್ವವಿದ್ಯಾಲಯ, ಕಾಲೇಜುಗಳಿಗೂ ಒಂದು ವಾರ ರಜೆ ಘೋಷಿಸಲಾಗಿದೆ. ಅಲ್ಲದೇ ಎಲ್ಲಾ ಪರೀಕ್ಷೆ ಮುಂದೂಡಿಕೆಯಾಗಿದೆ. ಆದರೆ ಪಿಯುಸಿ, ಎಸ್‍ಎಸ್‍ಎಲ್‍ಸಿ ಇತರೆ ಪರೀಕ್ಷೆಗಳು ನಡೆಯಲಿದೆ. ಇದಕ್ಕೆ ಎಲ್ಲ ರೀತಿಯ ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದರು. ಇದನ್ನೂ ಓದಿ: 1 ವಾರ ಕರ್ನಾಟಕ ಲಾಕ್ ಡೌನ್- ಮಾಲ್, ಕಾಲೇಜುಗಳಿಗೆ ರಜೆ, ಜಾತ್ರೆ ರದ್ದು
Advertisement
Advertisement
ಈಗಾಲೇ ದ್ವಿತೀಯ ಪಿಯುಸಿ ಪರೀಕ್ಷೆ ಶುರುವಾಗಿದೆ. ಹೀಗಾಗಿ ಪಿಯುಸಿ ಪರೀಕ್ಷೆಗಳು ನಿಗದಿಯಾಗಿದ್ದ ದಿನವೇ ನಡೆಯಲಿದೆ. ರಾಜ್ಯ ಸ್ತಬ್ಧ ಆದರೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಯಾವುದೇ ಆತಂಕಪಡುವ ಅಗತ್ಯ ಇಲ್ಲ. ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯುತ್ತವೆ. ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ. ದ್ವೀತಿಯ ಪಿಯುಸಿ ಪರೀಕ್ಷೆ ನಿಗದಿಯಂತೆ ಮುಂದುವರಿಯುತ್ತದೆ ಎಂದು ಪಿಯುಸಿ ಬೋರ್ಡ್ ನಿರ್ದೇಶಕಿ ಕನಗವಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಈ ತೆಗೆದುಕೊಂಡಿರುವ ನಿರ್ಧಾರ ಇಡಿ ರಾಜ್ಯಕ್ಕೆ ಅನ್ವಯವಾಗಲಿದೆ. ಸಾರ್ವಜನಿಕ ಹಿತ ದೃಷ್ಟಿಯಿಂದ ಈ ತೀರ್ಮಾನವನ್ನು ಕೈಗೊಂಡಿದ್ದೇವೆ. ಹೀಗಾಗಿ ರ್ಸಾಜನಿಕರು ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಮನವಿ ಮಾಡಿದರು.