ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ 244 ಜನರಿಗೆ ಗುರುವಾರ 48,200 ರೂಪಾಯಿ ದಂಡ ವಿಧಿಸಲಾಗಿದೆ.
ಕೋವಿಡ್ ನಿಯಮಗಳ ಪಾಲನೆಗಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾರ್ಷಲ್‍ಗಳನ್ನು ನೇಮಕ ಮಾಡಿದ್ದು, ಮಾರ್ಷಲ್‍ಗಳು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರು ಮಾಸ್ಕ್ ಧರಿಸದೇ ಓಡಾಡುವುದು. ಸಾಮಾಜಿಕ ಅಂತರ ಕಾಪಾಡದೇ ವ್ಯಾಪಾರ ಮಾಡುವವರಿಗೆ ದಂಡ ವಿಧಿಸುತ್ತಿದ್ದಾರೆ. ಇದನ್ನೂ ಓದಿ:ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ತಡೆಯಿಲ್ಲ
Advertisement
Advertisement
ಕೋವಿಡ್ ನಿಯಮಗಳನ್ನು ಪಾಲಿಸದ ಜನರಿಂದ ಪಾಲಿಕೆ ಇಲ್ಲಿಯವರೆಗೆ ಒಟ್ಟು 70,56,350 ರೂಪಾಯಿ ದಂಡ ವಸೂಲಿ ಮಾಡಿದ್ದು, ಪಾಲಿಕೆಯ ಎಲ್ಲ ವಲಯಗಳ ವ್ಯಾಪ್ತಿಯಲ್ಲಿ ಮಾರ್ಷಲ್‍ಗಳು, ಪರಿಸರ ಅಭಿಯಂತರು, ಆರೋಗ್ಯ ನಿರೀಕ್ಷಕರು ಮಾಸ್ಕ್ ಹಾಕಿಕೊಳ್ಳದ ಜನರಿಗೆ ದಂಡ ವಿಧಿಸಿ ಕೋವಿಡ್ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ.
Advertisement
Advertisement
ಗುರುವಾರ ಸಹ 38 ಜನರ ಮೇಲೆ ಪ್ರಕರಣ ದಾಖಲಿಸಿ 2,500 ರೂಪಾಯಿ ದಂಡ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 181 ಜನರ ಮೇಲೆ ಪ್ರಕರಣ ದಾಖಲಿಸಿ 36,200 ರೂ. ದಂಡ ಮತ್ತು ಸಾರ್ವಜನಿಕ ಸ್ಥಳದಲ್ಲಿ ಉಗುಳಿದ 25 ಜನರ ವಿರುದ್ಧ ಪ್ರಕರಣ ದಾಖಲಿಸಿ 2,500 ರೂ. ದಂಡ ವಿಧಿಸಲಾಗಿದೆ ಎಂದು ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಕೂಡಲೇ ಉಪ ನೋಂದಣಾಧಿಕಾರಿಗಳನ್ನು ವರ್ಗಾಯಿಸಿ – ಅಶೋಕ್‍ಗೆ ಶೆಟ್ಟರ್ ಪತ್ರ