ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳಿರೋ ವ್ಯಕ್ತಿಗಳಿಲ್ಲ: ಡಿಸಿ ಸ್ಪಷ್ಟನೆ

Public TV
1 Min Read
CKB DA

– ಸಾರ್ವಜನಿಕರೇ ಆತಂಕ ಬೇಡ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳಿರುವ ಯಾವುದೇ ವ್ಯಕ್ತಿಗಳಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ ಅಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರ್.ಲತಾ, ಜಿಲ್ಲೆಗೆ ವಿದೇಶಗಳಿಂದ ಇದುವರೆಗೂ 66 ಮಂದಿ ಆಗಮಿಸಿದ್ದಾರೆ. ಅದರಲ್ಲಿ 45 ಮಂದಿಯನ್ನ 14 ದಿನಗಳ ಕ್ವಾರಂಟೈನ್ ಮಾಡಲಾಗಿದ್ದು, ಅವರಿಗೆ ಯಾವುದೇ ರೀತಿಯ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

CKB

ಸದ್ಯ ಉಳಿದ 21 ಮಂದಿಗೆ ಹೋಂ ಕ್ವಾರಂಟೈನ್‍ನಲ್ಲಿದ್ದು, ಇದುವರೆಗೆ ಅವರಿಗೂ ಯಾವುದೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಹೀಗಾಗಿ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಕೊರೊನಾ ಸೋಂಕಿತ ಲಕ್ಷಣಗಳುಳ್ಳ ವ್ಯಕ್ತಿಗಳಿಲ್ಲದೆ ಇರುವುದರಿಂದ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು..

ಅಲ್ಲೀಪುರದಲ್ಲೂ ಸಹ ಸಂಶಯಾಸ್ಪದ ಪ್ರಕರಣಗಳಿಲ್ಲ, ಏರ್‌ಪೋರ್ಟಿನಲ್ಲಿ ಕೆಲಸ ಮಾಡುವ ಗುಡಿಬಂಡೆ ಮೂಲದ ವ್ಯಕ್ತಿಗೆ ಚಿಕಿತ್ಸೆ ಕೊಡಲಾಗಿದೆ ಅಷ್ಟೇ. ಅವರಿಗೂ ಸೋಂಕಿನ ಲಕ್ಷಣಗಳಿಲ್ಲ ಅಂತ ಸ್ಪಷ್ಟಪಡಿಸಿದರು. ಜಿಲ್ಲೆಯಾದ್ಯಾಂತ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಮನವಿ ಮಾಡಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *