– ಮೂಲ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಮುಂದೂಡಿಕೆ
ಬೆಂಗಳೂರು: ಮಾರಕ ಕೊರೊನಾ ಪರಿಣಾಮ ಎಲ್ಲದರ ಮೇಲೂ ಬೀರಲಾಂಭಿಸಿದೆ. ಕೊರೊನಾ ವೈರಸ್ ಬಿಸಿ ಈಗ ಕೆಪಿಎಸ್‍ಸಿ ಮೇಲೂ ತಟ್ಟಿದೆ. ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಳ ಮೇಲೂ ಕೊರೊನಾ ತನ್ನ ಕರಿಛಾಯೆ ಬೀರಿದೆ.
ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‍ಸಿ ಮೂಲ ಇತ್ತೀಚೆಗೆ ಪರೀಕ್ಷೆ ನಡೆಸಲಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ಬಾಕಿಯಿತ್ತು. ಆದರೆ ಈಗ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆಯನ್ನು ಮುಂದೂಡಲಾಗಿದೆ.
Advertisement
Advertisement
ಕೆಪಿಎಸ್ ಸಿ ಕೇಂದ್ರ ಕಚೇರಿಯಲ್ಲಿ ಮಾರ್ಚ್ 16ರಿಂದ ಮಾರ್ಚ್ 20ರವರೆಗೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಸಭೆ, ಸಮಾರಂಭ, ಶಾಲಾ ಕಾಲೇಜು, ಕಾರ್ಯಾಗಾರ ಮುಂತಾದವುಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.
Advertisement
ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ. 269 ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.