ಹಾವೇರಿ: ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರ ಸಂಖ್ಯೆಯೇ ಹೆಚ್ಚಿದ್ದು, ಹೀಗಾಗಿ ದೆಹಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಕುರಿತು ದೇಶದೆಲ್ಲೆಡೆ ಭಯ ಶುರುವಾಗಿದೆ. ಹಾವೇರಿ ಜಿಲ್ಲೆಯ 12 ಜನ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇವರ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Advertisement
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿ ಬಂದಿದ್ದ ಜಿಲ್ಲೆಯ 12 ಜನರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆ ಶನಿವಾರ ಶಿವಮೊಗ್ಗ ಲ್ಯಾಬ್‍ಗೆ ಕಳುಹಿಸಿತ್ತು. ನಿನ್ನೆ ಕಳುಹಿಸಿದ್ದ ಹನ್ನೆರಡು ಜನರ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ಎಲ್ಲವೂ ನೆಗಟಿವ್ ಆಗಿದೆ.
Advertisement
ಹನ್ನೆರಡು ಜನರಲ್ಲಿ ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಜನರಿದ್ದು, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ 12 ಜನರ ಸ್ಯಾಂಪಲ್ಸ್ ಗಳನ್ನ ಶಿವಮೊಗ್ಗ ಲ್ಯಾಬ್ ಗೆ ಕಳಿಸಿತ್ತು. ಹನ್ನೆರಡು ಜನರ ವರದಿಯೂ ನೆಗಟಿವ್ ಬಂದಿದೆ.