Connect with us

Corona

ಶಿಗ್ಗಾಂವಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ- ಸ್ವಯಂ ಲಾಕ್‍ಡೌನ್ ಘೋಷಿಸಿದ ವ್ಯಾಪಾರಿಗಳು

Published

on

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಜೂನ್ 30ರ ವರೆಗೆ ಹೋಟೆಲ್ ಹಾಗೂ ವ್ಯಾಪಾರ ವಹಿವಾಟು ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಹೊಟೇಲ್ ಉದ್ಯಮಿಗಳು ಸ್ವಯಂ ಪ್ರೇರಿತವಾಗಿ ಜೂನ್ 30ರ ವರೆಗೆ ವ್ಯಾಪಾರ, ವಹಿವಾಟು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿಗಳನ್ನು ತೆರೆಯಲು ಅಂಗಡಿ ಮಾಲೀಕರು ನಿರ್ಧರಿಸಿದ್ದಾರೆ.

 

ನಿನ್ನೆಯಷ್ಟೇ ಪಿಗ್ಮಿ ಕಲೆಕ್ಟರ್ ಗೆ ಕೊರೊನಾ ಸೋಂಕು ಧೃಡಪಟ್ಟಿದ್ದರಿಂದ ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ ಈವರೆಗೆ 20ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದರಿಂದ ಅಂಗಡಿ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೆ ಶಿಗ್ಗಾಂವಿ ನಗರವನ್ನು 15 ದಿನಗಳವರೆಗೆ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸುವಂತೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ತಹಶೀಲ್ದಾರ್‍ಗೆ ಹಾಗೂ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಅವರಿಗೆ ಮನವಿ ಮಾಡಿದ್ದಾರೆ.