ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ದೇಶವ್ಯಾಪಿ ತಾಂಡವಾಡುತ್ತಿರುವ ಹಿನ್ನೆಲೆಯಲ್ಲಿ ದೇಶದ ಮೂರು ರಾಜ್ಯಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ರಾಜ್ಯಗಳನ್ನು ಲಾಕ್‍ಡೌನ್ ಮಾಡಲಾಗಿದೆ.
ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 30 ರಾಜ್ಯಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದ್ದು, ಒಟ್ಟು 548 ಜಿಲ್ಲೆಗಳು ಬಂದ್ ಆಗಿವೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಒರಿಸ್ಸಾ ರಾಜ್ಯಗಳಲ್ಲಿ ಕೆಲವು ಜಿಲ್ಲೆಗಳನ್ನು ಮಾತ್ರ ಲಾಕ್‍ಡೌನ್ ಮಾಡಲಾಗಿದೆ. ಉಳಿದಂತೆ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣವಾಗಿ ಲಾಕ್‍ಡೌನ್ ಆಗಿವೆ.
Advertisement
30 states/UTs announce complete lockdown in the entire state/union territory covering 548 dist to prevent the spread of #CoronavirusPandemic. 3 states (Uttar Pradesh, Madhya Pradesh, Odisha) announce closure of certain areas. Lakshadweep announces lockdown on certain activities pic.twitter.com/vBSQ7ujS9r
— ANI (@ANI) March 23, 2020
Advertisement
ಲಕ್ಷ್ಯದ್ವೀಪದಲ್ಲಿಯೂ ಸಹ ಎಲ್ಲ ಕಾರ್ಯಚಟುವಟಿಕೆಗಳನ್ನು ಬಂದ್ ಮಾಡಲಾಗಿದ್ದು, ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ದೇಶದ ಎಲ್ಲ ರಾಜ್ಯಗಳು ಮಾರ್ಚ್ 31ರ ವರೆಗೂ ಸಂಪೂರ್ಣವಾಗಿ ಬಂದ್ ಆಗಲಿವೆ.
Advertisement
ಜಗತ್ತಿನಾದ್ಯಂತ ಲಂಗುಲಗಾಮಿಲ್ಲದೇ ರೌದ್ರತಾಂಡವವಾಡ್ತಿರುವ ಕೊರೋನಾ ಹೆಮ್ಮಾರಿಗೆ ಇಲ್ಲಿವರೆಗೆ 15,306 ಮಂದಿ ಬಲಿಯಾಗಿದ್ದಾರೆ. 3.50 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಅಮೆರಿಕಾದಲ್ಲಿ ಕೊರೋನಾಗೆ ನಿನ್ನೆ ಒಂದೇ ದಿನ 100 ಮಂದಿ ಮೃತಪಟ್ಟಿದ್ದು, ಒಟ್ಟಾರೆ 458 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 34 ಸಾವಿರ ದಾಟಿದೆ.
Advertisement
ಚೀನಾ ಇಟಲಿ ಬಳಿಕ ಹೆಚ್ಚಿನ ಸಂಖ್ಯೆ ವೈರಸ್ ಬಾಧಿತರು ಇರೋದು ಅಮೆರಿಕಾದಲ್ಲಿ ಎಂದು ವರದಿಯಾಗಿದೆ. ಇಟಲಿಯಲ್ಲಿ ಎರಡು ದಿನಕ್ಕೆ ಹೋಲಿಸಿದ್ರೆ ನಿನ್ನೆ ಮೃತರ ಸಂಖ್ಯೆ ಕಡಿಮೆಯಾಗಿದೆ. ನಿನ್ನೆ 651 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 5500ಕ್ಕೆ ಏರಿಕೆಯಾಗಿದೆ. ಸ್ಪೇನ್‍ನಲ್ಲಿ 2182, ಇರಾನ್‍ನಲ್ಲಿ 1812, ಫ್ರಾನ್ಸ್ 674, ಬ್ರಿಟನ್ 281, ನೆದರ್ ಲೆಂಡ್‍ನಲ್ಲಿ 179, ಜರ್ಮನಿಯಲ್ಲಿ 111 ಮಂದಿ ಸಾವನ್ನಪ್ಪಿದ್ದಾರೆ. ಜರ್ಮನಿ ಚಾನ್ಸಲರ್ ಏಂಜೆಲಾ ಮಾರ್ಕೆಲ್‍ರಲ್ಲಿ ಸೋಂಕು ಲಕ್ಷಣ ಕಂಡು ಬಂದಿದ್ದು, ಕ್ವಾರಂಟೇನ್‍ನಲ್ಲಿ ಇರಿಸಲಾಗಿದೆ. ನ್ಯೂಯಾರ್ಕ್ ನಗರದ ಜೈಲುಗಳಲ್ಲಿ 38 ಮಂದಿಗೆ ಕೊರೋನಾ ಸೋಂಕು ಕಂಡು ಬಂದಿದೆ.