ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಲಾಕ್‍ಡೌನ್ ಮತ್ತಷ್ಟು ಬಿಗಿಗೊಳಿಸಿದ್ದು, ಮಂಡ್ಯದ ಮೂರು ವಾರ್ಡ್‍ಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಡೆಡ್ಲಿ ವೈರಸ್ ಹರಡದಂತೆ ಜಿಲ್ಲಾಡಳಿತ ಹಲವು ಮುಂಜಾಗೃತ ಕ್ರಮ ಕೈಗೊಂಡಿದ್ದು, 5ನೇ ಸೋಂಕಿತ ವಾಸವಿದ್ದ ಬಡಾವಣೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಡ್ಯ ನಗರದ 30, 32, 33ನೇ ವಾರ್ಡ್ ಕಂಟೈನ್ಮೆಂಟ್ ಜೋನ್ ಘೋಷಿಸಲಾಗಿದ್ದು, ಯಾರೂ ಒಳಗೆ ಹೋಗುವಂತಿಲ್ಲ, ಹೊರಗೂ ಬರುವಂತಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
Advertisement
Advertisement
ತರಕಾರಿ, ಹಣ್ಣು, ದಿನಸಿ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಕಂಟೈನ್ಮೆಂಟ್ ಜೋನ್ ನಿಂದ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಗುರುತಿಸಲಾಗಿದ್ದು, ಈ ಪ್ರದೇಶದಲ್ಲಿ ಸಹ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಯನ್ನು ಬಂದ್ ಮಾಡಲಾಗಿದೆ. ಅನಗತ್ಯವಾಗಿ ಸಂಚರಿಸಿದರೆ, ಗುಂಪು ಸೇರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.