ನವದೆಹಲಿ : ಚೀನಾದಲ್ಲಿ 360ಕ್ಕೂ ಹೆಚ್ಚು ಮಂದಿಯನ್ನ ಬಲಿ ಪಡೆದುಕೊಂಡಿರುವ ಕೊರೊನಾ ಮಹಾಮಾರಿ ಕರ್ನಾಟಕದ ಗಡಿಗೂ ಬಂದಿದೆ. ಕೇರಳ ಕರ್ನಾಟಕ ಗಡಿ ಪ್ರದೇಶ ಕಾಸರಗೋಡಿನಲ್ಲಿ ಮೂರನೇ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಗೆ ಕಾಸರಗೋಡು ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯನ್ನು ದೃಢಪಡಿಸಿರುವ ಕೇರಳದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ, ಸೋಂಕಿತ ವ್ಯಕ್ತಿ ಇತ್ತಿಚೆಗೆ ಚೀನಾದಿಂದ ಕೇರಳಕ್ಕೆ ಆಗಮಿಸಿದ್ದರು. ತಪಾಸಣೆ ವೇಳೆ ಪಾಸಿಟಿವ್ ರಿಪೋರ್ಟ್ ಗಳ ಮೂಲಕ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ಆರಂಭಿಸಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿದೆ ಕೊರೊನಾ ವೈರಸ್ ಭೀತಿ – ಕರ್ನಾಟಕದಲ್ಲಿ ಕಟ್ಟೆಚ್ಚರ
Advertisement
Advertisement
ಭಾರತದ ಮೊದಲ ಬಾರಿಗೆ ಕೊರೊನಾ ವೈರಸ್ ಪ್ರಕರಣ ಕೇರಳದಲ್ಲೇ ವರದಿಯಾಗಿತ್ತು. ವುಹಾನ್‍ನಿಂದ ಬಂದ ವಿದ್ಯಾರ್ಥಿನಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದಾದ ಬಳಿಕ ಚೀನಾದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯಲ್ಲಿ ಸೋಂಕು ಕಂಡು ಬಂದಿತ್ತು. ಅವರನ್ನ ಅಲೆಪ್ಪಿಯ ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು ರೋಗಿಯ ಆರೋಗ್ಯ ಸದ್ಯ ಸ್ಥಿರವಾಗಿದೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?