Corona

ಕೊಡಗಿನಲ್ಲಿ ವಾರದ ಎಲ್ಲ ದಿನ ರಾತ್ರಿ 9 ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ

Published

on

Share this

ಮಡಿಕೇರಿ: ನೆರೆಯ ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಅಂತರ್ ರಾಜ್ಯ ಸಂಚರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿ ವಾರದ ಎಲ್ಲ ದಿನ ರಾತ್ರಿ 9ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಆಧರಿಸಿ, ಕೊಡಗು ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕೊಡಗು ಜಿಲ್ಲೆಯಲ್ಲಿ ಹಾಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿಯಮಗಳಿಗೆ ಕೆಳಕಂಡ ಅಂಶಗಳನ್ನು ಸೇರ್ಪಡೆಗೊಳಿಸಲಾಗಿದೆ. ಇಂದಿನಿಂದ ಅನ್ವಯವಾಗುವಂತೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಎರಡು ತಿಂಗಳು ಕೇರಳದಿಂದ ದಕ್ಷಿಣ ಕನ್ನಡ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ

ಪ್ರಮುಖ ಅಂಶಗಳು
– ಕಂಟೈನ್ಮೆಂಟ್ ವಲಯಗಳಲ್ಲಿ ಯಾವುದೇ ಚಟುವಟಿಕೆಳಿಗೆ ಅವಕಾಶ ಇಲ್ಲ
– ವಾರದ ಎಲ್ಲ ದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
– ಎಲ್ಲ ರೀತಿಯ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಿದೆ.
– ಜಿಲ್ಲೆಯ ಗಡಿಭಾಗಗಳಲ್ಲಿ ಮತ್ತು ಚೆಕ್ ಪೋಸ್ಟ್ ಗಳಲ್ಲಿ ನಡೆಸುತ್ತಿರುವ ಸರ್ವೇಕ್ಷಣಾ ಕ್ರಮಗಳು, ನಿರ್ಬಂಧಗಳು ಯಥಾವತ್ತಾಗಿ ಮುಂದುವರೆಯುತ್ತವೆ.
– ಸಾರ್ವಜನಿಕರು ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದು.
– ಎಲ್ಲ ಶಿಕ್ಷಣ ಸಂಸ್ಥೆಗಳು, ನರ್ಸಿಂಗ್, ಪ್ಯಾರಾ ಮೆಡಿಕಲ್ ಸಂಸ್ಥೆಗಳ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು ಕರ್ನಾಟಕಕ್ಕೆ ಇದುವರೆಗೆ ಹಿಂದಿರುಗದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಪ್ರಯಾಣವನ್ನು ಅಕ್ಟೋಬರ್-2021ರ ಅಂತ್ಯದವರೆಗೆ ಮುಂದೂಡುವಂತೆ ಸೂಚಿಸುವುದು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಅಕ್ಟೋಬರ್-2021ರ ಅಂತ್ಯದವರೆಗೆ ಕೇರಳಕ್ಕೆ ಪ್ರಯಾಣ ಮಾಡದಂತೆ ಸೂಚಿಸುವುದು.
– ಎಲ್ಲಾ ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಕಚೇರಿಗಳು, ಹೋಟೆಲ್‍ಗಳು, ಕಾರ್ಖಾನೆಗಳು ಹಾಗೂ ಇತರ ಉದ್ಯಮಗಳ ಆಡಳಿತಾಧಿಕಾರಿಗಳು, ಮಾಲೀಕರು ಕರ್ನಾಟಕಕ್ಕೆ ಇದುವರೆಗೆ ಹಿಂದಿರುಗದ ಉದ್ಯೋಗಿಗಳ ಪ್ರಯಾಣವನ್ನು ಅಕ್ಟೋಬರ್-2021ರ ಅಂತ್ಯದವರೆಗೆ ಮುಂದೂಡುವಂತೆ ಸೂಚಿಸುವುದು. ಉದ್ಯೋಗಿಗಳು ಅಕ್ಟೋಬರ್-2021ರ ಅಂತ್ಯದವರೆಗೆ ಕೇರಳಕ್ಕೆ ಪ್ರಯಾಣ ಮಾಡದಂತೆ ಸೂಚಿಸುವುದು.
– ನಿರೀಕ್ಷಿತ ಕೋವಿಡ್ 3ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತುರ್ತು, ಅವಶ್ಯಕತೆ ಇಲ್ಲದಿದ್ದರೆ ಸಾರ್ವಜನಿಕರೂ ಕೇರಳ ಪ್ರಯಾಣವನ್ನು ಅಕ್ಟೋಬರ್ 2021ರ ಅಂತ್ಯದವರೆಗೆ ಮುಂದೂಡಬೇಕು.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications