Connect with us

ಬೇಕಾಬಿಟ್ಟಿ ಓಡಾಟ- ಕೊಡಗಿನಲ್ಲಿ ವಾಹನಗಳು ಸೀಜ್

ಬೇಕಾಬಿಟ್ಟಿ ಓಡಾಟ- ಕೊಡಗಿನಲ್ಲಿ ವಾಹನಗಳು ಸೀಜ್

ಮಡಿಕೇರಿ: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೆ ತರಲಾಗಿದ್ದು, ಕೊಡಗು ಜಿಲ್ಲಾಡಳಿತ ಸಹ ಟಫ್ ರೂಲ್ಸ್ ಮಾಡಿದೆ. ವಾರದಲ್ಲಿ ಎರಡು ದಿನ ಮಾತ್ರ ಜನ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಉಳಿದ ದಿನಗಳಲ್ಲಿ ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅದರೂ ಗ್ರಾಮೀಣ ಭಾಗದಲ್ಲಿ ಕೆಲವರು ಅನಾವಶ್ಯಕವಾಗಿ ಸಂಚರಿಸುತ್ತಿದ್ದಾರೆ. ಈ ಹಿನ್ನೆಲೆ ಮಡಿಕೇರಿ ತಾಲೂಕಿನ ನಾಪೋಕ್ಲಿವಿನ ಪೊಲೀಸರು ಇಂದು ಬೆಳಗ್ಗೆಯಿಂದಲೇ ಪಟ್ಟಣದಲ್ಲಿ ಅನವಶ್ಯಕವಾಗಿ ಓಡಾಡುತ್ತಿರುವವರ ವಾಹಗಳನ್ನು ಸೀಜ್ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಜನ ಮಾತ್ರ ಇದರ ಅರಿವು ಇಲ್ಲದೆ ಪಟ್ಟಣ ಪ್ರದೇಶಗಳಲ್ಲಿ ಸುಖಾಸುಮ್ಮನೆ ಓಡಾಡುತ್ತಿದ್ದಾರೆ. ಹೀಗಾಗಿ ನಾಪೋಕ್ಲು ಠಾಣೆಯ ಎಸ್‍ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿ ಅನವಶ್ಯಕವಾಗಿ ಓಡಾಡುತ್ತಿದ್ದ 20ಕ್ಕೂ ಹೆಚ್ಚು ಬೈಕ್, 6 ಪಿಕಪ್, 5 ಕಾರ್ ಹಾಗೂ 3 ಮೊಪೆಡ್ ಸೇರಿದಂತೆ ಹಲವು ವಾಹಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement