ಮೈಸೂರು: ಲಾಕ್ಡೌನ್ ನಡುವೆಯೂ ಜಿಲ್ಲೆಯ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಒಂದು ತಿಂಗಳಿನಲ್ಲಿ 1,29,73,194 ರೂ. ಸಂಗ್ರಹವಾಗಿದೆ. 50 ಗ್ರಾಂ. ಚಿನ್ನ, 8 ಕೆಜಿ 200 ಗ್ರಾಂ. ಬೆಳ್ಳಿ, 12 ವಿದೇಶಿ ಕರೆನ್ಸಿಗಳು ಹುಂಡಿಯಲ್ಲಿ ಸಿಕ್ಕಿವೆ. ನಂಜನಗೂಡಿನ ದೇವಸ್ಥಾನದ ಸಿಬ್ಬಂದಿ ಹಾಗೂ ಕಾವೇರಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಿಬ್ಬಂದಿ ದೇವಸ್ಥಾನದ ಹುಂಡಿಯಲ್ಲಿರುವ ಹಣ ಹಾಗೂ ಚಿನ್ನಾಭರಣ ಎಣಿಕೆ ಮಾಡಿದ್ದಾರೆ. ಇದನ್ನೂ ಓದಿ: ಪಂಜ್ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!
ಲಾಕ್ಡೌನ್ ತೆರವು ನಂತರ ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆಯಲು ಭಕ್ತಾದಿಗಳ ಸಂಖ್ಯೆ ದಿನೇ ದಿನೇ ಏರುತ್ತಿರುವುದರಿಂದ ಹುಂಡಿಗಳಿಗೆ ಕಾಣಿಕೆ ಹೆಚ್ಚಾಗಿದೆ. ಆದರೂ ಕೊರೊನಾ ಹಾಗೂ ಲಾಕ್ಡೌನ್ ನಡುವೆಯೂ ಹೆಚ್ಚು ಹಣ ಸಂಗ್ರಹವಾಗಿದೆ.