– ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ
ಬೆಂಗಳೂರು: ರಾಜ್ಯದಲ್ಲಿ ಕೊರೊನಗೆ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ 65 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
Advertisement
ನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ವೃದ್ಧ ಸಾವನ್ನಪ್ಪಿದ್ದು, ಈ ಮೂಲಕ ಒಂದೇ ದಿನ ಕೊರೊನಾಗೆ ಇಬ್ಬರ ಬಲಿಯಾದಂತಾಗಿದೆ. ರಾಜ್ಯದಲ್ಲಿ ಇದೀಗ ಕೊರೊನಾ ಸಾವಿನ ಸಂಖ್ಯೆ ಎಂಟಕ್ಕೇರಿದು, ಸಿಲಿಕಾನ್ ಸಿಟಿಯಲ್ಲಿ ಒಟ್ಟು ಇಬ್ಬರು ಸಾವನ್ನಪ್ಪಿದಂತಾಗಿದೆ.
Advertisement
ESI ಆಸ್ಪತ್ರೆ ಕಲಬುರ್ಗಿಯಲ್ಲಿ #COVID19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು (P-205) ನಿಧನ ಹೊಂದಿದ್ದಾರೆ. ಅವರು ತೀವ್ರ ಉಸಿರಾಟದ ತೊಂದರೆಯಿಂದಾಗಿ (Severe acute respiratory illness) ಏಪ್ರಿಲ್ 7ರಂದು ಆಸ್ಪತ್ರೆಗೆ ದಾಖಲಾಗಿದ್ದರು.
— B Sriramulu (@sriramulubjp) April 13, 2020
Advertisement
ವೃದ್ಧ ಭಾನುವಾರವಷ್ಟೇ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತ್ಪಟ್ಟಿದ್ದಾರೆ. ಈ ಕುರಿತು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ. ಇಂದು ಕಲಬುರಗಿ 55 ವರ್ಷದ ವ್ಯಕ್ತಿ ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
Advertisement
ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, #Covid19 ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
— B Sriramulu (@sriramulubjp) April 13, 2020
ಆರೋಗ್ಯ ಸಚಿವ ಬಿ ಶ್ರೀರಾಮುಲು ಸಹ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದು, ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೊರೊನಾ ವೈರಸ್ ತಗುಲಿರುವ ಕುರಿತು ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.