ತಿರುವನಂತಪುರಂ: ದೇಶಾದ್ಯಂತ ಕೊರೊನಾ ತಾಂಡವ ಜೋರಾಗುತ್ತಿದ್ದು, ಕೇರಳದಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ ಕೇರಳ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಮಾತ್ರವಲ್ಲದೆ ಮಾರ್ಚ್ 31ರ ವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡಲು ಚಿತ್ರ ಸಂಘಟನೆಗಳು ನಿರ್ಧಾರ ತೆಗೆದುಕೊಂಡಿವೆ.
ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಕೊರೊನಾ ಹರಡುತ್ತಿದ್ದು, ಮೊದಲು ವೈರಸ್ ಕಾಣಿಸಿಕೊಂಡಿದ್ದ ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಇದೀಗ ಮತ್ತೆ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೇರಳ ತಲೆಕೆಡಿಸಿಕೊಂಡಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿಯವರೆಗೆ ಎಲ್ಲ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಆದೇಶಿಸಿದೆ.
Advertisement
Advertisement
ಇಂದು ಹೊಸ ಆರು ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಸಭೆ ನಡೆಸಿದ ಸಿಎಂ ಪಿಣರಾಯಿ ವಿಜಯನ್, ಏಳನೇ ತರಗತಿವರೆಗಿನ ಶಾಲೆಗಳಿಗೆ ಮಾರ್ಚ್ 31ರ ವರೆಗೆ ರಜೆ ನೀಡಿದ್ದಾರೆ. ಅಲ್ಲದೇ ಖಾಸಗಿಯಾಗಿ ನಡೆಸುವ ಟ್ಯೂಷನ್, ರಾಜಾ ದಿನದ ವಿಶೇಷ ತರಗತಿ, ಮದರಸಾಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸೂಚನೆ ನೀಡಿದ್ದಾರೆ.
Advertisement
8,9 ಮತ್ತು 10ನೇ ತರಗತಿಗಳಿಗೆ ನಿಗದಿಯಂತೆ ಪರೀಕ್ಷೆಗಳು ನಡೆಯಲಿದ್ದು, ಜನರು ಸಾರ್ವಜನಿಕವಾಗಿ ಗುಂಪು ಸೇರದಂತೆ ಮನವಿ ಮಾಡಿದ್ದಾರೆ. ಮದುವೆ ಮುಂತಾದ ಸಮಾರಂಭಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕೇರಳ ಸರ್ಕಾರ ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಮೂರು ವರ್ಷದ ಬಾಲಕಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಹೀಗಾಗಿ ಕೇರಳ ಸರ್ಕಾರ ಎಚ್ಚೆತ್ತುಕೊಂಡು ಶಾಲೆಗಳಿಗೆ ರಜೆ ಘೋಷಿಸಿದೆ.
Advertisement
ಸಿನಿಮಾ ಪ್ರದರ್ಶನ ರದ್ದು
ವೈರಸ್ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ಮಲೆಯಾಳಂ ಸಿನಿಮಾ ಒಕ್ಕೂಟಗಳು ಕೊಚ್ಚಿಯಲ್ಲಿ ಸಭೆ ನಡೆಸಿವೆ. ಸಭೆಯ ಬಳಿಕ ಮಾರ್ಚ್ 31ವರೆಗೂ ರಾಜ್ಯಾದ್ಯಂತ ಸಿನಿಮಾ ಪ್ರದರ್ಶನ ರದ್ದು ಮಾಡಲಾಗಿದೆ. ಥಿಯೇಟರ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸೇರ್ಪಡೆ ಹಿನ್ನಡೆ ವೈರಸ್ ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಕೂಟದ ಸದಸ್ಯರು ಹೇಳಿದ್ದಾರೆ.