Connect with us

ಮುತಾಲಿಕ್ ಕೊರೊನಾದಿಂದ ಬೇಗ ಗುಣಮುಖರಾಗುವಂತೆ ವಿಶೇಷ ಪೂಜೆ

ಮುತಾಲಿಕ್ ಕೊರೊನಾದಿಂದ ಬೇಗ ಗುಣಮುಖರಾಗುವಂತೆ ವಿಶೇಷ ಪೂಜೆ

ಧಾರವಾಡ: ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ, ಬೇಗ ಗುಣಮುಖರಾಗುವಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಗರದ ಲೈನ್ ಬಜಾರ್‍ನ ಹನುಮಂತ ದೇವರ ದೇವಸ್ಥಾನದಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಪ್ರಮೋದ್ ಮುತಾಲಿಕ್ ಆದಷ್ಟು ಬೇಗ ಕೊರೊನಾ ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಕೇವಲ ಧಾರವಾಡದಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಇಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅದರಂತೆ ಧಾರವಾಡದ ಲೈನ್ ಬಜಾರ್ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಮುತಾಲಿಕ್ ಅವರು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಸೇನೆಯ ರಾಜ್ಯ ಕಾರ್ಯದರ್ಶಿ ಗಂಗಾಧರ್ ಬೇಡಿಕೊಂಡಿದ್ದಾರೆ.

ಪ್ರಮೋದ್ ಮುತಾಲಿಕ್ ಅವರಿಗೆ ಶುಕ್ರವಾರವೇ ಕೊರೊನಾ ಸೋಂಕು ದೃಢಪಟ್ಟಿದ್ದು, ರಾತ್ರಿ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿದ್ದ ಪ್ರಮೋದ್ ಮುತಾಲಿಕ್, ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement