ಹಾಸನ: ಕೊರೊನಾ ಮೂರನೇ ಅಲೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಹಾಗೂ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ನಿಯಮ ಮೀರಿ ರಸ್ತೆ ಬದಿ ಹಾಕಿರುವ ಅಂಗಡಿಗಳನ್ನು ಚೆನ್ನರಾಯಪಟ್ಟಣದಲ್ಲಿ ಇಂದು ಬೆಳಗ್ಗೆ ತೆರವುಗೊಳಿಸಲಾಯಿತು.
ವರಮಹಾಲಕ್ಷ್ಮಿ ಹಬ್ಬದ ಸಮಯದಲ್ಲಿ ಹೆಚ್ಚು ಜನ ಖರೀದಿಗೆ ಮುಗಿಬೀಳುತ್ತಾರೆ. ಆದ್ದರಿಂದ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾಲೂಕು ಆಡಳಿತದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: 100 ಕರುಗಳನ್ನು ಸಾಗಿಸ್ತಿದ್ದ ವಾಹನ ಪಲ್ಟಿ – 50 ಕರುಗಳು ಸಾವು, 50 ಕರುಗಳ ರಕ್ಷಣೆ
Advertisement
Advertisement
ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಹಣ್ಣು, ತರಕಾರಿ, ಹೂವಿನ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳದಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ತಾಲೂಕು ಆಡಳಿತದ ಆದೇಶ ಪಾಲಿಸದ ಕೆಲವು ವ್ಯಾಪಾರಸ್ಥರು, ರಸ್ತೆ ಬದಿಯಲ್ಲಿ ವ್ಯಾಪಾರ ವಹಿವಾಟು ಮುಂದುವರಿಸಿದ್ದಾರೆ. ಇದರಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಲ್ಲದೆ ಕೊರೊನಾ ಭೀತಿ ಇದೆ ಎಂದು ಅಂಗಡಿ ತೆರವುಗೊಳಿಸಿ, ನಿಗದಿತ ಸ್ಥಳದಲ್ಲಿ ಅಂಗಡಿ ಹಾಕಲು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.