ನವದೆಹಲಿ: ಕೊರೊನಾ ವೈರಸ್ ಶಂಕಿತ ವ್ಯಕ್ತಿ 7ನೇ ಮಹಡಿಯಿಂದ ಜಿಗಿದು ಆತ್ಮಹೆತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ತನ್ವೀರ್ ಎಂದು ಗುರುತಿಸಲಾಗಿದ್ದು, ಪಂಜಾಬ್ ಮೂಲದ ತನ್ವೀರ್ ಸಿಂಗ್ ಬುಧವಾರ ಸಂಜೆ ಸಿಡ್ನಿಯಿಂದ ಹಿಂದಿರುಗಿದ್ದ. ಈತನನ್ನು ಪರೀಕ್ಷೆಗಾಗಿ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯ ಎಸ್‍ಎಸ್‍ಬಿ ಕಟ್ಟಡಕ್ಕೆ ಕರೆತರಲಾಗಿತ್ತು. ರಾತ್ರಿ 9 ಗಂಟೆಗೆ ವೇಳೆಗೆ ಎಸ್‍ಎಸ್‍ಬಿ ಕಟ್ಟಡ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement
Devender Arya, Deputy Commissioner of Police (South West): A suspected #COVID19 patient committed suicide by jumping from the Safdarjung Hospital. The deceased has been identified as Tanveer Singh, he was admitted at hospital today at 9 pm after returning from Sydney, Australia. pic.twitter.com/DKCeKZgtYT
— ANI (@ANI) March 18, 2020
Advertisement
ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಆತನ ಗಂಟಲಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರುವುದನ್ನು ಕಾಯುತ್ತಿದ್ದೆವು. ಅಷ್ಟರಲ್ಲೇ ಪಿಎಸ್-ಸಫ್ದರ್‍ಜಂಗ್ ಎನ್‍ಕ್ಲೇವ್ ವೈಡ್ ಡಿಡಿ ನಂ.42ಎ ನಂಬರ್ ನ ರೋಗಿ ಎಸ್‍ಎಸ್‍ಬಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದವನನ್ನು 35 ವರ್ಷದ ಪುರುಷ ಎಂದು ಗುರುತಿಸಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
Advertisement
ಕೊರೊನಾ ಶಂಕಿತ ವ್ಯಕ್ತಿಯನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರೆ ತಂದು ರಾತ್ರಿ 9ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಎಐ-301 ನಂಬರಿನ ವಿಮಾನದಲ್ಲಿ ಸಿಡ್ನಿಯಿಂದ ಆಗಮಿಸಿದ್ದ. ಕಳೆದ ಒಂದು ವರ್ಷದಿಂದ ಸಿಡ್ನಿಯಲ್ಲೇ ನೆಲೆಸಿದ್ದ. ಈತನಿಗೆ ವಿಪರೀತ ತಲೆನೋವು ಇತ್ತು ಎಂದು ನೋಡೆಲ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್‍ನಿಂದಾಗಿ 3ಜನ ಸಾವನ್ನಪ್ಪಿದ್ದು, 151 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.