ಬೆಳಗಾವಿ: ಈರುಳ್ಳಿ ವ್ಯಾಪಾರಿ ಸೇರಿದಂತೆ ಆತನ ಕುಟುಂಬದ ನಾಲ್ವರು ಸದಸ್ಯರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಆತನ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಇದೀಗ ಎದುರಾಗಿದೆ.
ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ ಹಾಗೂ ಜಿಲ್ಲೆಯಾದ್ಯಂತ ಆತಂಕ ತೀವ್ರಗೊಂಡಿದ್ದು, ಸೋಂಕಿತ ಸಂಖ್ಯೆ 128 ಸೇರಿದಂತೆ ತಂದೆ, ತಾಯಿ ಹಾಗೂ ಸಹೋದರನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಪೇಷಂಟ್ ನಂ. 128 ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. ನಂತರ ಉತ್ತರ ಪ್ರದೇಶದ ಚೇಕಡಾ ಗ್ರಾಮದಲ್ಲಿ ಸಹ ಧಾರ್ಮಿಕ ಪ್ರಚಾರ ನಡೆಸಿ, ಮಾರ್ಚ್ 22 ರಂದು ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮಕ್ಕೆ ಆಗಮಿದ್ದಾರೆ.
Advertisement
Advertisement
ಗ್ರಾಮಕ್ಕೆ ಮರಳಿದ ನಂತರ ಈರುಳ್ಳಿ ವ್ಯಾಪರದಲ್ಲಿ ತೊಡಗಿದ್ದು, ಪಾರಿಶ್ವಾಡ, ಹಿರೇಬಾಗೇವಾಡಿ, ಬಡಾಲ್ ಅಂಕಲಗಿ ಸಂತೆ ಸೇರಿದಂತೆ ವಿವಿಧೆಡೆ ವ್ಯಾಪಾರದಲ್ಲಿ ಭಾಗಿಯಾಗಿದ್ದಾರೆ. ತಂದೆ ಹಾಗೂ ಮಕ್ಕಳಿಬ್ಬರು ಈರುಳ್ಳಿ ವ್ಯಾಪರ ಮಾಡುತ್ತಾರೆ. ಈ ಮೂರು ಗ್ರಾಮಗಳಲ್ಲಿ ನಡೆಯುವ ಸಂತೆಗೆ 10ಕ್ಕೂ ಹೆಚ್ಚು ಗ್ರಾಮಗಳ ಜನ ಭಾಗಿಯಾಗುತ್ತಾರೆ. ಸದ್ಯ ಸೋಂಕಿತ ಕುಟುಂಬ ಬಳಿ ಯಾರೆಲ್ಲ ಈರುಳ್ಳಿ ಖರೀಸಿದ್ದಾರೆ, ಅವರೆಲ್ಲ ಆಂತಕದಲ್ಲಿದ್ದಾರೆ. ನಮಗೂ ಎಲ್ಲಿ ಸೋಂಕು ತಗುಲಿದೆಯೋ ಎಂಬ ದುಗುಡದಲ್ಲಿದ್ದಾರೆ.