Connect with us

Bengaluru City

ಸೋಮವಾರದಿಂದ ಭಕ್ತರಿಗೆ ಇಸ್ಕಾನ್ ದೇವಸ್ಥಾನ ಮುಕ್ತ- ಕೋವಿಡ್ ನಿಯಮ ಅನ್ವಯ

Published

on

ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ 5 ಜಾರಿ ಮಾಡಿದ ಬೆನ್ನಲ್ಲೇ ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಹುತೇಕ ಪ್ರಸಿದ್ಧ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಅಂತೆಯೇ ಇದೀಗ ನಗರದ ಪ್ರಸಿದ್ಧ ಇಸ್ಕಾನ್ ದೇವಾಲಯವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ.

ಅಕ್ಟೋಬರ್ 05 ರಿಂದ ಇಸ್ಕಾನ್ ದೇವಾಲಯ ಪುನರಾರಂಭವಾಗಲಿದೆ. ಸೋಮವಾರದಿಂದ ಸಾರ್ವಜನಿಕರಿಗೆ ಶ್ರೀಕೃಷ್ಣನ ದರ್ಶನ ಸಿಗಲಿದೆ. ಅನ್‍ಲಾಕ್ ಹಿನ್ನಲೆ ಇಸ್ಕಾನ್ ದೇವಾಲಯಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಆದರೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ.

ವಾರದ ದಿನಗಳಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 12:30ರ ವರೆಗೆ ಹಾಗೂ ಸಂಜೆ 4 ರಿಂದ ರಾತ್ರಿ 8 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ವಾರಾಂತ್ಯದಲ್ಲಿ ಬೆಳಗ್ಗೆ 9:30ರಿಂದ ರಾತ್ರಿ 8 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಎಲ್ಲ ಭಕ್ತರಿಗೆ ಕೋವಿಡ್-19 ನಿಯಮಗಳು ಅನ್ವಯವಾಗುತ್ತವೆ. ಮಾಸ್ಕ್, ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಇದಕ್ಕಾಗಿ ಇಸ್ಕಾನ್‍ನಲ್ಲಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೊರೊನಾ ಹಿನ್ನೆಲೆ ವಯೋಮಿತಿಯ ನಿಯಮವನ್ನು ಸಹ ವಿಧಿಸಲಾಗಿದೆ. 10 ವರ್ಷದೊಳಗಿನ ಮಕ್ಕಳು, 65 ವರ್ಷ ಮೆಲ್ಪಟ್ಟ ಹಿರಿಯರು ಹಾಗೂ ಗರ್ಭಿಣಿಯರಿಗೆ ಇಸ್ಕಾನ್ ದೇವಾಲಯದ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

Click to comment

Leave a Reply

Your email address will not be published. Required fields are marked *