– ಮಣಿಪಾಲದ ಕೆಎಂಸಿ ಆಸ್ಪತ್ರೆಯ ಒಪಿಡಿ ಬಂದ್
ಬೆಂಗಳೂರು: ಹೆಮ್ಮಾರಿ, ಡೆಡ್ಲಿ ವೈರಸ್ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಬುಧವಾರ 51 ಇದ್ದ ಕೊರೊನಾ ಪ್ರಕರಣ ಗುರುವಾರ ದಿಢೀರ್ 55ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ನಾಲ್ಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ವಿವಿಧ ರಾಜ್ಯಗಳಲ್ಲಿ ನಿತ್ಯವೂ ಸೋಂಕಿತರ ಸಂಖ್ಯೆ ಏರುವುದನ್ನು ಗಮನಿಸಿದರೆ ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ಕಾಲಿಟ್ಟಿದೇಯಾ ಎಂಬ ಅನುಮಾನ ಮೂಡಲು ಶುರುವಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ದೆಹಲಿಯಲ್ಲಿ ಗುರುವಾರ ತಲಾ 4 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೊರೊನಾ ಥರ್ಡ್ ಸ್ಟೇಜ್‍ಗೆ ಲಗ್ಗೆ ಇಟ್ಟಿದೇಯಾ? ಸಮುದಾಯಕ್ಕೆ ಕೊರೊನಾ ಹಬ್ಬುತಿದೇಯಾ ಎಂಬ ಅನುಮಾನಕ್ಕೆ ಕಾರಣ ಆಗಿದೆ.
Advertisement
Advertisement
ಮಣಿಪಾಲ:
ಮಣಿಪಾಲದ ಕೆಎಂಸಿ ಆಸ್ಪತ್ರೆ ಇಂದಿನಿಂದ ಏಪ್ರಿಲ್ 15 ರವರೆಗೆ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಸೇವೆ ಮಾತ್ರ ಮಣಿಪಾಲ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.
Advertisement
ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಗೆ ಕೆಎಂಸಿಯಲ್ಲಿ ಚಿಕಿತ್ಸೆ ಸಿಗುತ್ತಿರುವುದರಿಂದ ಒಪಿಡಿ ರೋಗಿಗಳಿಗೆ ಯಾವುದೇ ಸಮಸ್ಯೆಗಳು ಆಗಬಾರದು ಎನ್ನುವ ಉದ್ದೇಶದಿಂದ ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
Advertisement
ಕೊಡಗು ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹರಡದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗಿದೆ. ಮಡಿಕೇರಿಯಲ್ಲಿ ತರಕಾರಿ ಹಾಗೂ ಅಗತ್ಯ ವಸ್ತುಗಳ ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಮಾರುಕಟ್ಟೆಯಲ್ಲಿ ಮತ್ತು ಅಂಗಡಿ ಮುಂಗಟ್ಟುಗಳ ಮುಂದೆ ಖುದ್ದು ಪೊಲೀಸರೇ ಲ್ಯಾಂಡ್ ಮಾಕ ಮಾಡಿದ್ದಾರೆ. ಜನರು ಅಂತರಕಾಯ್ದುಕೊಂಡು ವಹಿವಾಟು ನಡೆಸುವಂತೆ ಸೂಚಿಸಿದ್ದಾರೆ.
ಮೈಸೂರಿನಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಿರಾಣಿ ಅಂಗಡಿ ಮಾಲೀಕರು ತಮ್ಮ ಅಂಗಡಿಯನ್ನು ಗಾಜಿನಲ್ಲಿ ಕವರ್ ಮಾಡಿದ್ದಾರೆ. ಮೈಸೂರಿನ ಇಟ್ಟಿಗೆಗೂಡಿನ ರಿಷಭ್ ಬಂಢಾರ್ ದಿನಸಿ ಅಂಗಡಿಯನ್ನು ಮಾಲೀಕರು ಗಾಜಿನಲ್ಲಿ ಮುಚ್ಚಿ ಅಂಗಡಿ ಪಕ್ಕ ಚಿಕ್ಕದೊಂದು ಜಾಗದ ತೆರೆದು ಅಲ್ಲಿಂದ ದಿನಸಿ ಪದಾರ್ಥ ವಿತರಣೆ ಮಾಡುತ್ತಿದ್ದಾರೆ. ಅಂಗಡಿಯ ಹೊರಗೆ ಸರತಿ ಸಾಲಿನಲ್ಲಿ ಮೂರು ಅಡಿ ಅಂತರದಲ್ಲಿ ಮಾರ್ಕಿಂಗ್ ಮಾಡಲಾಗಿದೆ. ಮಾಸ್ಕ್ ಧರಿಸಿ ಬಂದವರಿಗೆ ಮಾತ್ರ ಪದಾರ್ಥ ನೀಡಲಾಗುತ್ತಿದೆ.