– ಇಟಲಿ, ಸ್ಪೇನ್, ಫ್ರಾನ್ಸ್, ಅಮೆರಿಕದಲ್ಲಿ ಸಾವಿನ ಟೆನ್ಷನ್
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಜಗತ್ತಿನಾದ್ಯಂತ 196 ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4.69 ಲಕ್ಷಕ್ಕೇರಿದೆ.
ಕೊರೊನಾ ಭಾರತದಲ್ಲಿ ಈಗಾಗಲೇ 11 ಜನರನ್ನು ಬಲಿ ಪಡೆದಿದ್ದು, ವಿಶ್ವಾದ್ಯಂತ 21,185 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇಟಲಿಯಲ್ಲಿ ಬುಧವಾರ ಒಂದೇ ದಿನ 683 ಮಂದಿ ಬಲಿಯಾಗಿದ್ದಾರೆ. ಅಂದ್ರೆ ಇಟಲಿಯಲ್ಲಿ ಇಲ್ಲಿವರೆಗೆ 7,503 ಕೊರೊನಾ ಸೋಂಕಿತರು ಮಂದಿ ಸಾವನ್ನಪ್ಪಿದ್ದಾರೆ.
Advertisement
Advertisement
ಸ್ಪೇನ್ ಸಾವಿನ ಸಂಖ್ಯೆಯಲ್ಲಿ ಚೀನಾವನ್ನು ಮೀರಿಸಿದೆ. ಹೌದು, ಒಂದೇ ದಿನ ಸ್ಪೇನ್‍ನಲ್ಲಿ 656 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಷ್ಟೇ ಅಲ್ಲದೆ ಫ್ರಾನ್ಸ್‍ನಲ್ಲಿ 231 ಜನರು ಹಾಗೂ ಅಮೆರಿಕದಲ್ಲಿ 155 ಮಂದಿ ಕೊರೊನಾ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಪ್ರಿಲ್ 14ರವರೆಗೂ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಕೆಲವರು ಲಾಕ್‍ಡೌನ್ ಉಲ್ಲಂಘಿಸಿ ಉದ್ಧಟತನ ಮೆರೆಯುತ್ತಿದ್ದಾರೆ. ಹೀಗಾಗಿ ಕೊರೊನಾ ದೇಶದಲ್ಲಿ ಮತ್ತಷ್ಟು ಆತಂಕ ಹೆಚ್ಚಿಸುತ್ತಿದೆ. ಭಾರತ ಲಾಕ್‍ಡೌನ್ ಮೊದಲ ದಿನವೇ 70 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 606ಕ್ಕೆ ಏರಿದೆ.