ಬೆಂಗಳೂರು: 21 ದಿನ ಲಾಕ್‍ಡೌನ್ ಆಗಿದ್ದರೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 10 ಮಂದಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿರ ಸಂಖ್ಯೆ 98ಕ್ಕೆ ಏರಿಕೆ ಆಗಿದೆ.
ಮೈಸೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿಯೇ 14 ಮಂದಿ ಕೊರೊನಾ ಪಾಸಿಟಿವ್ ಬಂದಿದೆ. ಬಳ್ಳಾರಿಯಲ್ಲಿ ಮೂವರಿಗೆ, ಬೆಂಗಳೂರಿನಲ್ಲಿ ಇಬ್ಬರಿಗೆ, ಗೌರಿಬಿದನೂರಿನಲ್ಲಿ ಒಬ್ಬರಿಗೆ ಮತ್ತು ಭಟ್ಕಳದಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಒಟ್ಟು ಇವತ್ತು ಒಂದೇ ದಿನ ಹತ್ತು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
Advertisement
Advertisement
ಕೊರೊನಾ ಸೋಂಕಿತರ ವಿವರ:
ರೋಗಿ 89 – 52 ವರ್ಷದ ವ್ಯಕ್ತಿ, ಹೊಸಪೇಟೆ – ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಸದ್ಯಕ್ಕೆ ಇವರನ್ನು ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
Advertisement
ರೋಗಿ 90 – 48 ವರ್ಷದ ಮಹಿಳೆ, ಹೊಸಪೇಟೆ-ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಇವರು ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಇವರನ್ನು ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ರೋಗಿ 91 – 26 ವರ್ಷದ ಮಹಿಳೆ, ಹೊಸಪೇಟೆ-ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿದ್ದು, ಇವರು ಮಾರ್ಚ್ 16ರಂದು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಸದ್ಯಕ್ಕೆ ಇವರನ್ನು ಬಳ್ಳಾರಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ 92 – 40 ವರ್ಷದ ವ್ಯಕ್ತಿ, ಬೆಂಗಳೂರು ನಿವಾಸಿಯಾಗಿದ್ದು (ಪ್ರಕರಣ 59 ರ ಸಂಪರ್ಕಿತ). ಇವರನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ 93 – 19 ವರ್ಷದ ಯುವಕನಾಗಿದ್ದು, ಬೆಂಗಳೂರು ನಿವಾಸಿ. ಮಾರ್ಚ್ 22ರಂದು ನ್ಯೂಯಾರ್ಕ್, ಯುಎಸ್ಎಯಿಂದ ಭಾರತಕ್ಕೆ ವಾಪಸ್ ಬಂದಿದ್ದನು.
ರೋಗಿ 94 – 40 ವರ್ಷದ ಮಹಿಳೆಯಾಗಿದ್ದು, ಗೌರಿಬಿದನೂರು-ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಯಾಗಿರುತ್ತಾರೆ. ಇವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 95 – 35 ವರ್ಷದ ವಕ್ತಿಯಾಗಿದ್ದು, ಮೈಸೂರು ಜಿಲ್ಲೆಯ ನಿವಾಸಿಯಾಗಿರುತ್ತಾರೆ. (ಪ್ರಕರಣ 52ರ ಸಂಪರ್ಕಿತ). ಇವರನ್ನು ಮೈಸೂರು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಬೆಳಗ್ಗೆ 8 ಗಂಟೆಯವರೆಗೆ 10 ವ್ಯಕ್ತಿಗಳಲ್ಲಿ #COVID19 ಸೋಂಕು ಖಚಿತವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 98ಕ್ಕೆ ಏರಿದೆ. ನಾಗರಿಕರು ಮುಂಜಾಗೃತ ಕ್ರಮಗಳನ್ನು ಕೈಗೊಂಡು ಮನೆಯಲ್ಲಿರಬೇಕೆಂದು ವಿನಂತಿಸುತ್ತೇನೆ. #IndiaFightsCorona
— B Sriramulu (@sriramulubjp) March 31, 2020
ರೋಗಿ 96 – 41 ವರ್ಷದ ವ್ಯಕ್ತಿಯಾಗಿದ್ದು, ಮೈಸೂರು ಜಿಲ್ಲೆಯ ನಿವಾಸಿಯಾಗಿರುತ್ತಾರೆ. (ಪ್ರಕರಣ 52ರ ಸಂಪರ್ಕಿತ). ಇವರನ್ನು ಮೈಸೂರು ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 97 – 34 ವರ್ಷದ ವ್ಯಕ್ತಿ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ಮಾರ್ಚ್ 18ರಂದು ದುಬೈನಿಂದ ಭಾರತಕ್ಕೆ ಹಿಂದಿರುಗಿದ್ದಾನೆ. ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 98 – 26 ವರ್ಷದ ಯುವಕನಾಗಿದ್ದು, ಭಟ್ಕಳ-ಉತ್ತರ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ಮಾರ್ಚ್ 20ರಂದು ದುಬೈನಿಂದ ಭಾರತಕ್ಕೆ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಇರುತ್ತದೆ. ಇವರನ್ನು ಉತ್ತರ ಕನ್ನಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ವೈದ್ಯಕೀಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, “ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಬೆಳಗ್ಗೆ 8 ಗಂಟೆಯವರೆಗೆ 10 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಖಚಿತವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 98ಕ್ಕೆ ಏರಿದೆ. ನಾಗರಿಕರು ಮುಂಜಾಗೃತ ಕ್ರಮಗಳನ್ನು ಕೈಗೊಂಡು ಮನೆಯಲ್ಲಿರಬೇಕೆಂದು ವಿನಂತಿಸುತ್ತೇನೆ” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.