-ಚೀನಾದಲ್ಲಿ 3,158 ಮಂದಿ ಸಾವು
ನವದೆಹಲಿ: ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ಮಹಾಮಾರಿ ಕೊರೊನಾ ವೈರಸ್ ಭಾರತದಲ್ಲಿ 61 ಮಂದಿಗೆ ತಗುಲಿದ್ದು, ಚೀನಾದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3,158ಕ್ಕೆ ಏರಿಕೆಯಾಗಿದೆ.
Advertisement
ಚೀನಾದಲ್ಲಿ ಸುಮಾರು 80,778 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಭಾರತದಲ್ಲಿ ಸುಮಾರು 61 ಮಂದಿಗೆ ಕೊರೊನಾ ತಗುಲಿದ್ದು, ಕರ್ನಾಟಕದಲ್ಲಿ 4 ಮಂದಿ ಕೊರೊನಾ ತುತ್ತಾಗಿರುವುದು ಧೃಡಪಟ್ಟಿದೆ. ಇತ್ತ ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು 14 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿದೆ.
Advertisement
Advertisement
ಇತ್ತ ಇರಾನ್‍ನಲ್ಲಿ ಕೂಡ ಕೊರೊನಾ ಮರಣಮೃದಂಗ ಬಾರಿಸುತ್ತಿದೆ. 291 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದು, 8,042 ಮಂದಿಗೆ ಸೋಂಕು ತಗುಲಿದೆ. ಈ ಮಧ್ಯೆ ಇರಾನ್‍ನಲ್ಲಿ ಇದ್ದ 58 ಭಾರತೀಯರನ್ನು ಭಾರತೀಯ ವಾಯುಪಡೆ ತಾಯ್ನಾಡಿಗೆ ವಾಪಸ್ ಕರೆತಂದಿದೆ.
Advertisement
ಮಹಾಮಾರಿ ಕೊರೊನಾಗೆ ಭಾರತೀಯರೊಬ್ಬರು ಸಾವನ್ನಪ್ಪಿದ್ದಾರೆ. ಭಾರತೀಯ ಮೂಲದ ಬ್ರಿಟನ್‍ನಲ್ಲಿದ್ದ ಮನೋಹರ್ ಕೃಷ್ಣ ಪ್ರಭು(80) ಸಾವನ್ನಪ್ಪಿದ ವ್ಯಕ್ತಿ. ಇವರು ವ್ಯಾಟ್‍ಫೋರ್ಡ್ ಜನರಲ್ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.
ಈ ಮೂಲಕ ಪ್ರಭು ಅವರು ಕೊರೊನಾ ವೈರಸ್‍ನಿಂದ ಸಾವನ್ನಪ್ಪಿದ ಆರನೇ ವ್ಯಕ್ತಿ ಯಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇವರು ಕೃಷ್ಣನ ಭಕ್ತರಾಗಿದ್ದು, ವ್ಯಾಟ್‍ಫೋರ್ಡ್‍ನಲ್ಲಿರುವ ಭಕ್ತವೇದಾಂತಕ್ಕೆ ಯಾವಾಗಲೂ ಭೇಟಿ ನೀಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.