– ಅಂತರ್ ರಾಜ್ಯ, ಎಲ್ಲಾ ಜಿಲ್ಲೆಗಳ ಬಾರ್ಡರ್ ಸೀಲ್
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶವೇ ಲಾಕ್‍ಡೌನ್ ಆಗಿದೆ. ಆದರೂ ಕೆಲವರು ಮನೆಯಿಂದ ಹೊರಗಡೆ ಬಂದು ಸುತ್ತಾಡುತ್ತಿದ್ದಾರೆ. ಹೀಗಾಗಿ ನಾಳೆಯಿಂದ ಮನೆಯಿಂದ ಹೊರ ಬಂದವರನ್ನು ಅರೆಸ್ಟ್ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಖಡಕ್ ಸೂಚನೆ ಕೊಟ್ಟಿದ್ದಾರೆ.
ಪೊಲೀಸರು ಎಷ್ಟೇ ಹೇಳಿದರೂ ಕೆಲವರು ಮನೆಯಿಂದ ಹೊರಬರುತ್ತಿದ್ದಾರೆ. ಇತ್ತ ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ನಾಳೆಯಿಂದ ಲಾಕ್‍ಡೌನ್ ಉಲ್ಲಂಘಿಸಿ ಹೊರಗಡೆ ತಿರುಗಾಡಿದರೆ ಅರೆಸ್ಟ್ ಮಾಡಿ ಎಂದು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಯಡಿಯೂರಪ್ಪ ಡಿಸಿ ಮತ್ತು ಎಸ್‍ಪಿಗಳಿಗೆ ಮೌಖಿಕ ಆದೇಶ ರವಾನಿಸಿದ್ದಾರೆ.
Advertisement
Advertisement
ಕೊರೊನಾಗೆ ಕರ್ನಾಟಕ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಸಿಗಳ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಜಿಲ್ಲೆಗಳ ಪರಿಸ್ಥಿತಿ ತಿಳಿಯಲು ಡಿಸಿಗಳ ಜೊತೆ ಸಿಎಂ ಯಡಿಯೂರಪ್ಪ ಮೂಲಕ ಸಭೆ ನಡೆಸಿದ್ದು, ಸಚಿವರಾದ ಅಶೋಕ್, ಬೊಮ್ಮಾಯಿ, ಸುರೇಶ್ ಕುಮಾರ್, ಸುಧಾಕರ್, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
Advertisement
ವಿಡಿಯೋ ಕಾನ್ಫರೆನ್ಸ್‍ನ ಮುಖ್ಯಂಶಗಳು:
* ಮಾನ್ಯ ಪ್ರಧಾನ ಮಂತ್ರಿ ಅವರ ಸೂಚನೆಯಂತೆ 21 ದಿನಗಳ ಲಾಕ್‍ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಂತ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ.
* ಲಾಕ್‍ಡೌನ್ ಮೀರಿ ಹೊರ ಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ.
* ಅಂತರ್ ರಾಜ್ಯ ಮತ್ತು ಎಲ್ಲಾ ಜಿಲ್ಲೆಯ ಬಾರ್ಡರ್‌ಗಳನ್ನು ಸೀಲ್ ಮಾಡಬೇಕು.
* ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡಬೇಕು.
* ಈಗಾಗಲೇ ಡಿಸ್ಟಲರಿ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದ್ದು, ಕೆಲವು ಕಂಪನಿಗಳ ಉಚಿತವಾಗಿ ನೀಡಲು ಮುಂದೆ ಬಂದಿವೆ. ಅದರ ಸದಾವಕಾಶ ಬಳಕೆಗೆ ಸೂಚನೆ
Advertisement
* ನಿಮ್ಮ ಏನೇ ಸಮಸ್ಯೆ ಇದ್ದರು ಕೂಡಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು.
* ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್‍ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ಧ ಕ್ರಮ.
* ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ಧ ಕ್ರಮ.
* ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್ ಕೋವಿಡ್‍ಗಾಗಿ ಮೀಸಲಿಡುವಂತೆ ಸೂಚನೆ.
* ವೈದ್ಯರು ಮತ್ತು ನರ್ಸ್ ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು.
* ಪಾಸ್ ಇದ್ದವರು ತುರ್ತು ಕೆಲಸ ಇದ್ದವರಿಗೆ ಮಾತ್ರ ಹೊರಗಡೆ ಹೋಗಲು ಅವಕಾಶ.
* ಅಗತ್ಯ ವಸ್ತು ತೆಗೆದುಕೊಳ್ಳೋರು ಅದೇ ಏರಿಯಾದ ರಸ್ತೆಯಲ್ಲಿನ ಅಂಗಡಿಯಲ್ಲಿ ತೆಗೆದುಕೊಳ್ಳಬೇಕು. ಅಲ್ಲಿ ಇಲ್ಲದೆ ಹೋದರೆ ಪಕ್ಕದ ರಸ್ತೆಯಲ್ಲಿ ಅಗತ್ಯ ವಸ್ತು ತೆಗೆದುಕೊಳ್ಳಬೇಕು. ಬೇರೆ ಏರಿಯಾಗೆ ಹೋದರೆ ಅರೆಸ್ಟ್.