ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 127 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು, ಈವರೆಗೆ 4,986 ಮಂದಿಯನ್ನು ಬಲಿಪಡೆದಿದೆ. ಹೀಗೆ ಎಲ್ಲೆಡೆ ತನ್ನ ಕರಿನೆರಳು ಬೀರುತ್ತಿರುವ ಕೊರೊನಾ ಜನರಲ್ಲಿ ಭಯ ಹುಟ್ಟಿಸಿದೆ.
Advertisement
ಒಟ್ಟು 127 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 1,34,769 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,117 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 4,983 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸುಮಾರು 70,388 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ 59,398 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 5,757 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಬೀ ಕೇರ್ ಫುಲ್: ಕೊರೊನಾ ಲಕ್ಷಣ ಏನು? ಹೇಗೆ ಹರಡುತ್ತದೆ? ಮುಂಜಾಗೃತ ಕ್ರಮ ಏನು?
Advertisement
Advertisement
ಎಷ್ಟು ಸಾವು? ಎಷ್ಟು ಚೇತರಿಕೆ?
ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.
Advertisement
1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,814 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 64,118 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,117 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 13,519 ಮಂದಿ ಕೊರೊನಾದಿಂದ ಬಳಲುತ್ತಿದ್ದು, 4,020 ರೋಗಿಗಳ ಸ್ಥಿತಿ ಗಂಭಿರವಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೊನಾ ಎಫೆಕ್ಟ್ – 1 ರಿಂದ 6ನೇ ತರಗತಿವರೆಗಿನ ಪರೀಕ್ಷೆ ರದ್ದು
2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 15,113 ಮಂದಿ ತುತ್ತಾಗಿದ್ದು, ಅವರಲ್ಲಿ 1,258 ಮಂದಿ ಚೇತರಿಸಿಕೊಂಡಿದ್ದಾರೆ. 1,016 ಮಂದಿ ಮೃತಪಟ್ಟಿದ್ದು, ಪ್ರಸ್ತುತ 12,839 ಮಂದಿ ಕೊರೊನಾದಿಂದ ಬಳಲುತ್ತಿದ್ದರೆ ಹಾಗೂ 1,153 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ.
3. ಇರಾನ್ – 10,075 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 3,276 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 6,370 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 429 ಸೋಂಕಿತರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ, ಚೀನಾದ ಹುಬೆ ಪ್ರಾಂತ್ಯದಲ್ಲಿ ಸಿಂಗಲ್ ಡಿಜಿಟ್‍ಗೆ ಕೊರೊನಾ ಕೇಸ್ ಇಳಿಕೆ
4. ದಕ್ಷಿಣ ಕೊರಿಯಾ – 7,979 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 510 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 67 ಮಂದಿ ಕೊರೊನಾಗೆ ಬಲಿಯಾಗಿದ್ದರೆ, 93 ಮಂದಿ ಸೋಂಕಿತರ ಸ್ಥಿತಿ ಚಿಂತಾಜನಕವಾಗಿದೆ. ಪ್ರಸ್ತುತ 7,402 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
5. ಸ್ಪೇನ್ – 3,146 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 189 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 2,871 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 190 ಮಂದಿ ಸ್ಥಿತಿ ಗಂಭಿರವಾಗಿದೆ ಹಾಗೂ 86 ಮಂದಿ ಬಲಿಯಾಗಿದ್ದಾರೆ. ಇದನ್ನೂ ಓದಿ: ಡೆಡ್ಲಿ ಕೊರೊನಾಗೂ ‘ಎಣ್ಣೆ’ನೇ ಮದ್ದು- ಕೈಗೂ, ಹೊಟ್ಟೆಗೂ ಎಣ್ಣೆ ಬಿದ್ರೆ ಫುಲ್ ಸೇಫ್ ಅಂತೆ!
6. ಫ್ರಾನ್ಸ್ – 2,876 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 12 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, 129 ರೋಗಿಗಳ ಸ್ಥಿತಿ ಗಂಭಿರವಾಗಿದೆ. ಸದ್ಯ 2,803 ಮಂದಿ ಸೋಂಕಿನಿಂದ ಬಳಲುತ್ತಿದ್ದು, 61 ಮಂದಿ ಜೀವ ಕಳೆದುಕೊಂಡಿದ್ದಾರೆ.
7. ಜರ್ಮನಿ – 2,745 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 25 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 6 ಮಂದಿ ಬಲಿಯಾಗಿದ್ದು, 9 ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪ್ರಸ್ತುತ 2,714 ರೋಗಿಗಳು ಕೊರೊನಾದಿಂದ ಬಳಲುತ್ತಿದ್ದಾರೆ.
8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 41 ಮಂದಿ ಬಲಿಯಾಗಿದ್ದಾರೆ. 1,762 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 31 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,690 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದರೆ, 10 ಮಂದಿ ಸ್ಥಿತಿ ಗಂಭಿರವಾಗಿದೆ.
9. ಭಾರತ – ದೇಶಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 75 ಮಂದಿ ತುತ್ತಾಗಿದ್ದು, 4 ಮಂದಿ ಗುಣಮುಖರಾಗಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಬಲಿಯಾಗಿದ್ದಾರೆ.
10. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಕೊರೊನಾ ವೈರಸ್ ಹರಡಿದೆ. ಈವರೆಗೆ 21 ಮಂದಿ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ.
ಇತ್ತ ಕೊರೊನಾ ಪೀಡಿತ ದೇಶಗಳಲ್ಲಿ ಇರುವ ಭಾರತೀಯರನ್ನು ರಾಷ್ಟ್ರಕ್ಕೆ ವಾಪಸ್ ಕರೆತರುವ ಕಾರ್ಯ ಕೂಡ ಭರದಿಂದ ನಡೆಯುತ್ತಿದ್ದು, ಹೀಗೆ ಭಾರತಕ್ಕೆ ಬಂದವರ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆಯನ್ನು ಕೂಡ ಘೋಷಿಸಲಾಗಿದೆ. ಹಾಗೆಯೇ ಐಟಿ ಕಂಪನಿಗಳ ಸಾಕಷ್ಟು ಮಂದಿ ಉದ್ಯೋಗಿಗಳು ಕೊರೊನಾ ಭೀತಿಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯವಸ್ಥೆ ಮೊರೆಹೋಗುತ್ತಿದ್ದು, ಕಂಪನಿ, ಆಫೀಸ್, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.