– 24 ಗಂಟೆಯಲ್ಲಿ 49 ಸಾವು
– 1,990 ಹೊಸ ಪ್ರಕರಣಗಳು ಪತ್ತೆ
ನವದೆಹಲಿ: ಭಾರತದಲ್ಲಿ ದಿನ ಕಳೆದಂತೆ ಕೊರೊನಾ ಅಟ್ಟಹಾಸ ಜೋರಾಗುತ್ತಿದ್ದು, ಸೋಂಕಿತರ ಸಂಖ್ಯೆ 26,496ಕ್ಕೆ ಏರಿದೆ. ಕಳೆದ 24 ಗಂಟೆಯಲ್ಲಿ 49 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 1,990 ಹೊಸ ಸೋಂಕಿತ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ.
Advertisement
ಈವರೆಗೆ ಒಟ್ಟು 824 ಮಂದಿಯನ್ನು ಕೊರೊನಾ ವೈರಸ್ ಬಲಿಪಡೆದಿದೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ದೇಶದ ವಿವಿಧ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ ಶೇ. 13.8ರಷ್ಟು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇತ್ತ ಮುಂಬೈ ನಗರದಲ್ಲಿಯೇ ಶೇ. 47.6ರಷ್ಟು ಪ್ರಕರಣಗಳು ವರದಿಯಾಗಿದೆ. ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಗುಜರಾತ್ ಎರಡನೇ ಸ್ಥಾನದಲ್ಲಿದ್ದು, ಅಹಮದಾಬಾದ್‍ನಲ್ಲಿ ಶೇ. 62ರಷ್ಟು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
Advertisement
Advertisement
ಮಹಾರಾಷ್ಟ್ರದಲ್ಲಿ 7,628 ಮಂದಿಗೆ ಸೋಂಕು ತಗುಲಿದ್ದು, 323 ಮಂದಿ ಸಾವನ್ನಪ್ಪಿದ್ದಾರೆ. 1,076 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಜರಾತ್‍ನಲ್ಲಿ 3,071 ಮಂದಿ ಕೊರೊನಾಗೆ ತುತ್ತಾಗಿದ್ದು, 133 ಮಂದಿ ಸಾವನ್ನಪ್ಪಿದ್ದಾರೆ.
Advertisement
ಇತ್ತ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 2,625ಕ್ಕೆ ಏರಿದ್ದು, 54 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,141 ಮಂದಿಗೆ ಸೋಂಕು ತಗುಲಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 500 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 158 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೇರಳದಲ್ಲಿ ಕೊರೊನಾ ಈಗ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಈವರೆಗೆ 458 ಮಂದಿಗೆ ಸೋಂಕು ತಗುಲಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ 338 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.