ಕೊರೊನಾಗೆ 24 ಗಂಟೆಯಲ್ಲಿ 27 ಸಾವು – ಸೋಂಕಿತರ ಸಂಖ್ಯೆ 4,200ಕ್ಕೆ ಏರಿಕೆ

Public TV
1 Min Read
Corona 1 1

ಬೆಂಗಳೂರು: 27 ಜನರು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ತಲುಪಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ.

Corona 2

ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 1ರಂದು ದೇಶದಲ್ಲಿ ಅಂದಾಜು 2 ಸಾವಿರ ಸೋಂಕಿತರಿದ್ದರು. ಕೇವಲ ನಾಲ್ಕೈದು ದಿನಗಳಲ್ಲಿ ಈ ಸಂಖ್ಯೆ ಡಬಲ್ ಆಗಿದೆ.

Corona 1

ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ವೇಗವಾಗಿ ಕೊರೊನಾ ಹಬ್ಬುತ್ತಿದೆ. ಶೇ.30ರಷ್ಟು ಕೊರೊನಾ ಸೋಂಕಿತ ಪ್ರಕರಣಗಳು ದೆಹಲಿ ಜಮಾತ್ ಲಿಂಕ್ ಹೊಂದಿವೆ. ಇದೇ ರೀತಿ ಕೊರೊನಾ ಪ್ರಕರಣಗಳ ಸಂಕ್ಯೆ ಹೆಚ್ಚಾದಲ್ಲಿ ಈ ಮುಂದಿನ ಏಳು ದಿನಗಳಲ್ಲಿ ದ್ವಿಗುಣವಾಗುವ ಸಾಧ್ಯತೆಗಳಿವೆ.

Tabligh e Jamaat Nizamuddin Markaz Delhi Corona 1

ದೇಶದ 274 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಾಗಿ ಕೊರೊನಾಗೆ ತುತ್ತಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ. ಕೊರೊನಾದಿಂದ ತತ್ತರಿಸಿರುವ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲು ಇತರೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *