– ಸಿಎಂ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ನಿರ್ಧಾರ
– ಕೊರೊನಾ ತಡೆಗೆ 200 ಕೋಟಿ ರೂ. ಹಣ ಬಿಡುಗಡೆ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೂ ರಾಜ್ಯ ಬಂದ್ ವಿಸ್ತರಣೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ರಾಜ್ಯ ಮತ್ತು ದೇಶದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಈ ಸಭೆಯಲ್ಲಿ ಮಾರ್ಚ್ 31ರವರೆಗೆ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆಯೋ ಅವುಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಹೀಗಾಗಿ ಮಾಲ್ ಗಳು, ಸಿನಿಮಾ ಥಿಯೇಟರ್, ಪಬ್, ಈಜುಕೊಳ, ಸಭೆ, ಸಮಾರಂಭ, ಜಾತ್ರೆಗಳಿಗೆ ನಿರ್ಬಂಧ ಹೇರಲಾಗಿದೆ.
Advertisement
Advertisement
ಮನೆಯಲ್ಲೇ ಇರಬೇಕೆಂದು ವೈದ್ಯರು ಸೂಚನೆ ನೀಡಿದ್ದರೂ ಟೆಕ್ಕಿಯೊಬ್ಬ ಬೆಂಗಳೂರಿನ ಹಲವು ಕಡೆ ಸುತ್ತಾಡಿದ ಹಿನ್ನೆಲೆಯಲ್ಲಿ ಚೀನಾ, ಇಟಲಿಯ ನಗರಗಳಂತೆ ಸಿಲಿಕಾನ್ ಸಿಟಿಯೂ ಲಾಕ್‍ಡೌನ್ ಆಗುತ್ತಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈ ಬೆಂಗಳೂರನ್ನು ಲಾಕ್‍ಡೌನ್ ಮಾಡದೇ ಇರಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
Advertisement
ಸಭೆಯಲ್ಲಿ 4 ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ತುರ್ತು 200 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ. ಸಚಿವರಾದ ಡಾ.ಅಶ್ವಥ್ ನಾರಾಯಣ, ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಮತ್ತು ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ನಿತ್ಯ ಈ ತಂಡದ ಸದಸ್ಯರು ಕೊರೊನಾ ಬಗ್ಗೆ ಮಾಹಿತಿ ತಿಳಿಸಲಿದ್ದಾರೆ.
Advertisement
ಸಭೆಯ ನಿರ್ಧಾರಗಳು
– ವಿದೇಶಗಳಿಂದ ರಾಜ್ಯಕ್ಕೆ ಬರುವ ಎಲ್ಲ ಪ್ರಯಾಣಿಕರನ್ನು ಪರೀಕ್ಷಿಸಿ ಪ್ರತ್ಯೇಕ 14 ದಿನ ಇಡಲು ತೀರ್ಮಾನ
– ನಿತ್ಯ ಎರಡು ಸಲ ಈ ಟಾಸ್ಕ್ ಫೋರ್ಸ್ ನಿಂದ ಕೊರೋನಾ ಅಪ್ಡೇಟ್ ಬುಲೆಟಿನ್ ಗಳ ಪ್ರಕಟಣೆ.
– ಬೆಂಗಳೂರು ಲಾಕ್ ಔಟ್ ನಿರ್ಧಾರ ಸದ್ಯಕ್ಕಿಲ್ಲ.
– ಬೆಂಗಳೂರಿನಲ್ಲಿ ರೆಸ್ಟೋರೆಂಟ್ಸ್, ಹೊಟೇಲ್ ಗಳಿಗೆ ನಿರ್ಬಂಧ ಇಲ್ಲ.
– ಕೊರೊನ ನಿರ್ವಹಣೆಗೆ 200 ಕೋಟಿ ರೂ ತುರ್ತು ನಿಧಿ ಮೀಸಲು.
– ವಿಧಾನಸಭೆ, ವಿಕಾಸಸೌಧ ಕಡೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.
– ದೊಡ್ಡ ಮಟ್ಟದ ಸಭೆ ಸಮಾರಂಭ ಮಾಡಲು ಅವಕಾಶ ಇಲ್ಲ.
– ಹಕ್ಕಿಜ್ವರ ಮತ್ತು ಮಂಗನ ಕಾಯಿಲೆಗಳ ತಡೆಗೂ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಿರ್ಧಾರ.