– ಮಂಡ್ಯದಲ್ಲಿ ಮೂವರಿಗೆ ಕೊರೊನಾ
– ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 175ಕ್ಕೆ ಏರಿಕೆ
– ಜಮಾತ್‍ನಿಂದಾಗಿ 8 ಮಂದಿಗೆ ಕೊರೊನಾ
ಬೆಂಗಳೂರು: ಲಾಕ್‍ಡೌನ್ ಇದ್ದರೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇವತ್ತು ಒಂದೇ ದಿನ 12 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು 175 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಇಂದು 12 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಮಂಡ್ಯದಲ್ಲಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋದವರ ನಿರ್ಲಕ್ಷ್ಯದಿಂದ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಕೊರೊನಾ ಪಾಸಿಟಿವ್ ಕಂಡು ಬರುತ್ತಿದೆ.
Advertisement
Advertisement
ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ನಿಜಾಮುದ್ದೀನ್‍ಗೆ ಹೋಗಿ ಬಂದವರ ಸಂಪರ್ಕದಲ್ಲಿರುವವರಿಗೆ ಕೊರೊನಾ ಸೋಂಕು ತಗಲಿದ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ನಿಜಾಮುದ್ದೀನ್‍ಗೆ ಹೋಗಿ ಬಂದವರು ಸರಿಯಾಗಿ ಕ್ವಾರಂಟೈನ್ ಆಗದ ಪರಿಣಾಮ ಈಗ ಅವರ ಜೊತೆ ಸಂಪರ್ಕದಲ್ಲಿದ್ದವರಿಗೂ ಕೊರೊನಾ ಭೀತಿ ಉಂಟಾಗಿದೆ.
Advertisement
ಕೊರೊನಾ ಸೋಂಕಿತರ ವಿವರಗಳು
ರೋಗಿ 164 – 33 ವರ್ಷದ ಪುರುಷನಾಗಿದ್ದು, ಬಾಗಲಕೋಟೆಯ ಮುಧೋಳ್ ನಿವಾಸಿ. ಮಾರ್ಚ್ 13 ರಿಂದ 18ರವರೆಗೆ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸದ್ಯಕ್ಕೆ ಬಾಗಲಕೋಟೆಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ರೋಗಿ 165 – 41 ವರ್ಷದ ಮಹಿಳೆಯಾಗಿದ್ದು, ಬಾಗಲಕೋಟೆ ನಿವಾಸಿಯಾಗಿದ್ದಾರೆ. ಇವರು 125ರ ಸೋಂಕಿತ ರೋಗಿಯ ನೆರೆಹೊರೆಯವರು. ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿ 166 – 80 ವರ್ಷ ವೃದ್ಧೆಯಾಗಿದ್ದು, ಗದಗ ಜಿಲ್ಲೆಯವರಾಗಿದ್ದಾರೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಬಂದಿದೆ. ಗದಗ ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 167 – 29 ವರ್ಷದ ಪುರುಷನಾಗಿದ್ದು, ಬೆಂಗಳೂರು ನಗರದ ನಿವಾಸಿ. ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 168 – 50 ವರ್ಷದ ವ್ಯಕ್ತಿ, ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ರೋಗಿ 169 – 35 ವರ್ಷದ ಬೆಂಗಳೂರು ನಗರದ ನಿವಾಸಿಯಾಗಿದ್ದು, ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ರೋಗಿ 170 – 68 ವರ್ಷ ವೃದ್ಧನಾಗಿದ್ದು, ಬೆಂಗಳೂರು ನಗರದ ನಿವಾಸಿಯಾಗಿದ್ದಾರೆ. ದುಬೈನಿಂದ ಬಂದಿರುವ ಇತಿಹಾಸವಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 171 – 32 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 172 – 36 ವರ್ಷದ ಪುರುಷನಾಗಿದ್ದು, ಮಂಡ್ಯ ನಿವಾಸಿ. ಇವರು ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 173 – 65 ವರ್ಷದ ವ್ಯಕ್ತಿ, ಮಂಡ್ಯ ನಿವಾಸಿ. ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ಹೋಗಿದ್ದ 134, 135, 136, 137 ಮತ್ತು 138 ಸೋಂಕಿತರ ಜೊತೆ ಸಂಪರ್ಕದಲ್ಲಿದ್ದರು. ಸದ್ಯಕ್ಕೆ ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 174 – 28 ವರ್ಷದ ಮಹಿಳೆಯಾಗಿದ್ದು, ಕಲಬುರಗಿ ನಿವಾಸಿಯಾಗಿದ್ದಾರೆ. ಕೊರೊನಾ ರೋಗಿ 124 ಸೋಂಕಿತರ ಸಂಪರ್ಕದಲ್ಲಿದ್ದರು. ಅಲ್ಲದೇ ಈ ರೋಗಿಯ ಸೊಸೆಯಾಗಿದ್ದಾರೆ. ಸದ್ಯಕ್ಕೆ ಕಲಬುರಗಿಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.
ರೋಗಿ 175 – 57 ವರ್ಷದ ಪುರುಷನಾಗಿದ್ದು, ಕಲಬುರಗಿ ನಿವಾಸಿ. ಟ್ರಾವೆಲ್ ಹಿಸ್ಟರಿ ಇರದೇ ಇದ್ದರೂ ಅತಿ ಹೆಚ್ಚು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಲಬುರಗಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗದಗ ಹಾಗೂ ಕಲಬುರಗಿಯ ಎರಡು ಹೊಸ ಪ್ರಕರಣದಿಂದ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಯಾಕೆಂದರೆ ಗದಗ ಹಾಗೂ ಕಲಬುರ್ಗಿ ಇಬ್ಬರು ಸೋಂಕಿತರಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲ, ಸೋಂಕಿತರ ಜೊತೆ ಸಂಪರ್ಕವೂ ಇಲ್ಲ. ಆದರೂ ಉಸಿರಾಟದ ತೊಂದರೆ ಮತ್ತು ಶ್ವಾಸಕೋಶ ಸಮಸ್ಯೆ ಇದೆ. ಇಂತಹವರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ ಉಸಿರಾಟದ ತೊಂದರೆ ಇರುವವರಿಗೆ ಅತೀ ಬೇಗ ಕೊರೊನಾಗೆ ತುತ್ತಾಗುತ್ತಿರುವ ಪ್ರಕರಣ ಕಂಡುಬರುತ್ತಿದೆ.