– ಸಾವಿನ ಸಂಖ್ಯೆ 15ಕ್ಕೆ ಏರಿಕೆ
ನವದೆಹಲಿ: ಮಾರಕ ಕೊರೊನಾ ವೈರಸ್ ದೇಶದಲ್ಲಿ ಇಂದು ಒಂದೇ ದಿನಕ್ಕೆ ಇಬ್ಬರನ್ನು ಬಲಿ ಪಡೆದುಕೊಂಡಿದ್ದು, ಈವರೆಗೆ ಕೊರೊನಾ ಸೋಂಕಿತ 15 ಜನರು ಮೃತಪಟ್ಟಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸಿಂಗಪುರ್‌ನ ಹೈದರ್‌ಪೊರಾದಿಂದ ಬಂದಿದ್ದ 65 ವರ್ಷದ ಕೊರೊನಾ ಸೋಂಕಿತ ವೃದ್ಧ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಜಮ್ಮು-ಕಾಶ್ಮೀರದಲ್ಲಿ ಕೊರೊನಾಗೆ ಮೊದಲ ಬಲಿ ಇದಾಗಿದೆ. ಅಷ್ಟೇ ಅಲ್ಲದೆ ಅವರ ಜೊತೆಗೆ ಸಂಪರ್ಕ ಹೊಂದಿದ್ದ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
Advertisement
A 65-year-old man from Hyderpora, Srinagar passes away due to Coronavirus; Four of his contacts also tested positive yesterday: J&K Principal Secretary (Planning Commission) Rohit Kansal (file pic) pic.twitter.com/HKgVLciSkK
— ANI (@ANI) March 26, 2020
Advertisement
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಕೊರೊನಾ ಸೋಂಕಿತ 65 ವರ್ಷದ ವೃದ್ಧೆ ನಿಧನರಾಗಿದ್ದಾರೆ. ಮುಂಬೈ ಮತ್ತು ಥಾಣೆಗಳಲ್ಲಿ ಹೊಸದಾಗಿ ಎರಡು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಒಟ್ಟು 124 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ ಒಟ್ಟು ಮೂವರು ಮೃತಪಟ್ಟಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ.
Advertisement
ವಿಶ್ವದಾದ್ಯಂತ 21,000ಕ್ಕೂ ಹೆಚ್ಚು ಜನರು ಕೊರೊನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಅಷ್ಟೇ 7,500ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಸ್ಪೇನ್‍ನಲ್ಲಿ 3,600ಕ್ಕೂ ಹೆಚ್ಚು ಮೃತಪಟ್ಟಿದ್ದು, ಚೀನಾದ ಸಾವಿನ ಸಂಖ್ಯೆಯನ್ನು ದಾಟಿದೆ. ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ 900ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 60,000 ಮಂದಿ ಸೋಂಕಿತರಿದ್ದಾರೆ. ಇರಿಂದಾಗಿ ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ದೊಡ್ಡಣ್ಣ ಅಪಾಯಕಾರಿ ಮಟ್ಟವನ್ನು ತಲುಪಿದೆ.
Advertisement
A 65-year-old woman from Mumbai who tested positive for Coronavirus, passes away; cause of death yet to be ascertained: Maharashtra Health Department https://t.co/z4wSKGVoro
— ANI (@ANI) March 26, 2020
ಭಾರತದಲ್ಲಿ ಇಲ್ಲಿಯವರೆಗೆ 600ಕ್ಕೂ ಹೆಚ್ಚು ಪ್ರಕರಣಗಳಿದ್ದು, 15 ಜನರು ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶವನ್ನು ಸಂಪೂರ್ಣ ಲಾಕ್‍ಡೌನ್ ಮಾಡುವಂತೆ ಆದೇಶ ನೀಡಿದ್ದಾರೆ. ಈ ಮೂಲಕ ಮನೆಯೊಳಗೆ ಇರಲು ಮತ್ತು ಅಗತ್ಯಗಳಿಗಾಗಿ ಮಾತ್ರ ಮನೆಯಿಂದ ಹೊರಗೆ ಬರುವಂತೆ ತಿಳಿಸಲಾಗಿದೆ.
ಭಾರತದಲ್ಲಿ ಬುಧವಾರ ಒಂದೇ ದಿನಕ್ಕೆ 100ಕ್ಕೂ ಹೆಚ್ಚು ಕೊರೊನಾ ಹೊಸ ಪ್ರಕರಣಗಳು ಹಾಗೂ 3 ಸಾವು ದಾಖಲಿಸಿದೆ. 125 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿದ ರಾಜ್ಯವಾಗಿದೆ.