– ಹೂ ಬೆಳೆಗಾರರಿಗೆ 25 ಸಾವಿರ ಪರಿಹಾರ
ಬೆಂಗಳೂರು: ಕೊರೊನಾ ಲಾಕ್‍ಡೌನ್ ಆಗಿ 47 ದಿನಗಳು ಕಳೆದಿವೆ. ಲಾಕ್‍ಡೌನ್ ಅವಧಿಯಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ತುತ್ತಾದವರು ಆಯಾ ದಿನದ ಕೆಲಸವನ್ನೇ ನಂಬಿ ಜೀವನ ನಡೆಸುತ್ತಾ ಬಂದಿವರೇ ಆಗಿದ್ದಾರೆ. ವೃತ್ತಿನಿರತ ಕ್ಷೌರಿಕರು, ಅಗಸರು, ರೈತರು, ಆಟೋ ಟ್ಯಾಕ್ಸಿ ಚಾಲಕರು, ಹೂ, ಹಣ್ಣು ಬೆಳೆಗಾರರು ಸಾಕಷ್ಟು ಕಷ್ಟ ನಷ್ಟಗಳನ್ನು ಉಂಡಿದ್ದರು. ಉದ್ಯಮ ವಲಯವೂ ಸ್ತಬ್ಧ ಆಗಿ ಉದ್ಯಮಿಗಳು ಕಂಗಾಲಾಗಿದ್ದರು. ಇದೀಗ ಈ ವರ್ಗದವರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದಿದ್ದರೂ ಕೆಲಸ ಇಲ್ಲದೇ ಸಂಕಷ್ಟದಲ್ಲಿರುವ ಶ್ರಮಿಕ ವರ್ಗಕ್ಕೆ ನೆರವಾಗುತ್ತಿದ್ದೇವೆ ಎಂದು ತಿಳಿಸಿದರು. ಸರ್ಕಾರದ ಈ ಪ್ಯಾಕೇಜ್ ಅನ್ನು ಕಾಂಗ್ರೆಸ್ ಸ್ವಾಗತಿಸಿದೆ. ಆದರೆ ಇದು ಸಾಲ್ದು, ಕನಿಷ್ಠ 10 ಸಾವಿರ ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಶ್ರಮಿಕರಿಗೆ ನೆರವಾಗಬೇಕು. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಅಲ್ಲಿಯೇ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
Advertisement
Advertisement
ಶ್ರಮಿಕ ವರ್ಗಕ್ಕೆ ನೆರವು:
ಅಗಸರು, ಕ್ಷೌರಿಕರಿಗೆ ತಲಾ 5 ಸಾವಿರ ರೂ. ನೆರವು ನೀಡಲಾಗುತ್ತದೆ. ಬಟ್ಟೆ ಒಗೆಯುವ, ಇಸ್ತ್ರಿ ಕೆಲಸದಲ್ಲಿ ತೊಡಗಿದ್ದ ಸುಮಾರು 60 ಸಾವಿರ ಅಗಸರು ಹಾಗೂ ಕ್ಷೌರಿಕ ವೃತ್ತಿ ಮಾಡುತ್ತಿರುವ 2.30 ಲಕ್ಷ ಮಂದಿಗೆ ತಲಾ 5 ಸಾವಿರ ರೂ. ಸಿಗಲಿದೆ.
Advertisement
ಆಟೋ, ಟ್ಯಾಕ್ಸಿ ಚಾಲಕರು:
ರಾಜ್ಯದಲ್ಲಿರುವ ಸರಿಸುಮಾರು 7.75 ಲಕ್ಷ ಮಂದಿ ಆಟೋ ಹಾಗೂ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗಿದೇ ಒದ್ದಾಡುತ್ತಿದ್ದಾರೆ. ಅಂತಹ 7.75 ಲಕ್ಷ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಸರ್ಕಾರವು 5,000 ರೂ. ನೆರವು ನೀಡಲಿದೆ.
Advertisement
ಆಟೋ, ಟ್ಯಾಕ್ಸಿ ಚಾಲಕರಿಗೆ ನೆರವು;
ಲಾಕ್ ಡೌನ್ ನಿಂದಾಗಿ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದಲ್ಲಿರುವ ಸುಮಾರು 7,75,000 ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು ಘೋಷಿಸಿದ್ದಾರೆ.#BSYforPoor pic.twitter.com/JTGLen9Hwv
— CM of Karnataka (@CMofKarnataka) May 6, 2020
ನೋಂದಾಯಿತ ಕಟ್ಟಡ ಕಾರ್ಮಿಕರು:
ರಾಜ್ಯದಲ್ಲಿರುವ 15 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮೊದಲು 2 ಸಾವಿರ ರೂ. ನೆರವು ನೀಡಲಾಗುತ್ತಿತ್ತು. ಇದೀಗ ಇದಕ್ಕೆ 3 ಸಾವಿರ ರೂಪಾಯಿಗಳನ್ನು ಸೇರಿಸಿ ಒಟ್ಟು ಐದು ಸಾವಿರ ರೂ. ನೆರವು ನೀಡಲು ಸರ್ಕಾರ ತೀರ್ಮಾನಿಸಿದೆ. ಇದುವರೆಗೆ 11 ಲಕ್ಷ ಮಂದಿಗೆ 2 ಸಾವಿರ ರೂ. ನೆರವು ನೀಡಲಾಗಿತ್ತು. ಉಳಿದ 4 ಲಕ್ಷ ಕಾರ್ಮಿಕರ ಅಕೌಂಟ್ ಮಾಹಿತಿ ಪಡೆದು, ಎಲ್ಲರಿಗೂ ಐದು ಸಾವಿರ ರೂ. ನೆರವು ನೀಡಲಾಗುತ್ತದೆ.
ಹೂ ಬೆಳೆಗಾರರು:
ಲಾಕ್‍ಡೌನ್‍ನಿಂದಾಗಿ ದೇವಾಲಯಗಳು ಮುಚ್ಚಿವೆ. ಹಬ್ಬ ಮದುವೆ, ಸಭೆ-ಸಮಾರಂಭ ಸೇರಿ ಯಾವುದೇ ಚಟುವಟಿಕೆ ನಡೆದಿಲ್ಲ. ಹೀಗಾಗಿ ಹೂವುಗಳಿಗೆ ಬೇಡಿಕೆ ಇಲ್ಲದೇ ಹೂವು ಬೆಳೆಗಾರರು ತಾವು ಬೆಳೆದ ಹೂವುಗಳನ್ನು ನಾಶ ಮಾಡುವ ಸ್ಥಿತಿ ಏರ್ಪಟ್ಟಿದೆ. ರಾಜ್ಯದಲ್ಲಿ 11,687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಹೀಗಾಗಿ ಹೂ ಬೆಳೆಗಾರರಿಗೆ ಒಂದು ಹೆಕ್ಟೇರ್‌ಗೆ 25 ಸಾವಿರ ರೂ.ನಂತೆ ಪರಿಹಾರ ಹಣ ನೀಡಲಿದೆ. ರೈತರು ಎಷ್ಟೇ ಹೆಕ್ಟೇರ್ ಗಳಲ್ಲಿ ಹೂ ಬೆಳೆದಿದ್ದರೂ ಸರ್ಕಾರ ಪರಿಹಾರ ನೀಡುವುದು ಒಂದು ಹೆಕ್ಟೇರ್‌ಗೆ ಮಾತ್ರ.
ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ನಷ್ಟಕ್ಕೆ ಒಳಗಾಗಿರುವ ತರಕಾರಿ, ಹಣ್ಣು ಬೆಳೆಗಾರರಿಗೆ ಶೀಘ್ರದಲ್ಲಿ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ.#BSYforPoor pic.twitter.com/YAbgzDMLmZ
— CM of Karnataka (@CMofKarnataka) May 6, 2020
ನೇಕಾರರ ಹಣ ವಾಪಸ್!
ಲಾಕ್‍ಡೌನ್‍ನಿಂದಾಗಿ ನೇಕಾರಿಗೆ ನಿಂತು ಹೋಗಿ, ಇದನ್ನೇ ನಂಬಿಕೊಂಡಿದ್ದರವರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಇವರ ನೆರವಿಗೂ ಸರ್ಕಾರ ಧಾವಿಸಿದೆ. ಒಟ್ಟು 109 ಕೋಟಿ ರೂಪಾಯಿಗಳನ್ನು ನೇಕಾರರ ಸಾಲ ಮನ್ನಾಗೆ ಸರ್ಕಾರ ಮೀಸಲಿಟ್ಟಿದೆ. ಈ ಮೊದಲು 29 ಕೋಟಿ ರೂ.ಗಳನ್ನು ಮನ್ನಾ ಮಾಡಲಾಗಿತ್ತು. ಶೀಘ್ರವೇ ಉಳಿದ 80 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. 1 ಲಕ್ಷದ ಒಳಗಿನ ಸಾಲವನ್ನು ಕಟ್ಟಿದ ನೇಕಾರರರಿಗೆ, ಕಟ್ಟಿದ ಹಣ ವಾಪಾಸ್ ಕೊಡಲು ಸರ್ಕಾರ ಮುಂದಾಗಿದೆ. ಅಲ್ಲದೇ ನೇಕಾರ್ ಸಮ್ಮಾನ್ ಯೋಜನೆಯಡಿ ರಾಜ್ಯದ 54 ಸಾವಿರ ಕೈ ಮಗ್ಗ ನೇಕಾರರಿಗೆ ವರ್ಷಕ್ಕೆ 2 ಸಾವಿರ ರೂ. ನೆರವು ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.
ಕಂದಾಯ-ವಿದ್ಯುತ್‍ಬಿಲ್ ಪಾವತಿ:
ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಮನೆ, ಸೈಟ್ ಸೇರಿ ಇತರೆ ಕಂದಾಯಗಳನ್ನು ಪಾವತಿ ಮಾಡಲು ಸಾರ್ವಜನಿಕರಿಗೆ ಸರ್ಕಾರ ಮೂರು ತಿಂಗಳ ಅವಕಾಶ ನೀಡಿದೆ. ಈ ಎರಡು ತಿಂಗಳ ಗೃಹ, ಅಂಗಡಿಗಳ ವಿದ್ಯುತ್ ಬಿಲ್ ಕಟ್ಟುವುದು ತಡವಾಗಿದ್ದರೆ ಚಿಂತೆ ಬಿಡಿ. ತಡವಾಗಿ ಬಿಲ್ ಪಾವತಿ ಮಾಡುವವರಿಗೆ ಯಾವುದೇ ದಂಡ ವಿಧಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ ನಿಗದಿತ ಗಡುವಿನಲ್ಲಿ ಬಿಲ್ ಕಟ್ಟಿದವರಿಗೆ ಶೇಕಡಾ 1ರಷ್ಟು ರಿಯಾಯಿತಿ ಕೂಡ ಸರ್ಕಾರ ನೀಡಲಿದೆ.
ಕಟ್ಟಡ ಕಾರ್ಮಿಕರಿಗೆ ನೆರವು;
15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ.ಗಳನ್ನು ನೀಡುವುದಾಗಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ಘೋಷಿಸಿದ್ದಾರೆ. ಹಿಂದಿನ ಕಂತನ್ನು ಈಗಾಗಲೇ 11.80 ಲಕ್ಷ ಕಟ್ಟಡ ಕಾರ್ಮಿಕರಿಗೆ ಪಾವತಿಸಲಾಗಿದೆ. #BSYforPoor pic.twitter.com/IF5Yj2OLkQ
— CM of Karnataka (@CMofKarnataka) May 6, 2020
ಕರೆಂಟ್ ಬಿಲ್ ಮನ್ನಾ:
ಕೊರೊನಾ ಲಾಕ್‍ಡೌನ್ ಕಾರಣದಿಂದ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಸ್ತಬ್ಧ ಆಗಿದ್ದವು. ಉತ್ಪಾದಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲಾಗದೇ ನಷ್ಟ ಸಹ ಅನುಭವಿಸಿದ್ದಾರೆ. ಹೀಗಾಗಿ ಇವರ ನೆರವಿಗೂ ಸರ್ಕಾರ ಮುಂದಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳ ಕರೆಂಟ್ ಬಿಲ್‍ನ್ನು ಮನ್ನಾ ಮಾಡಲು ಬಿಎಸ್‍ವೈ ಸರ್ಕಾರ ನಿರ್ಧರಿಸಿದೆ. ಜೊತೆಗೆ ಬೃಹತ್ ಕೈಗಾರಿಕೆಗಳ 2 ತಿಂಗಳ ವಿದ್ಯುತ್ ಬಿಲ್ ಪಾವತಿ ವಿಳಂಬ ಆಗಿದ್ದಲ್ಲಿ ಯಾವುದೇ ದಂಡ ವಿಧಿಸದಿರಲು, ಬಡ್ಡಿ ರಹಿತವಾಗಿ ಮುಂದೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ತರಕಾರಿ, ಹಣ್ಣು ಬೆಳೆಗಾರರಿಗೆ ಶೀಘ್ರವೇ ಪರಿಹಾರ:
ಈ ವರ್ಷ ರಾಜ್ಯದಲ್ಲಿ ತರಕಾರಿ ಮತ್ತು ಹಣ್ಣು ಇಳುವರಿ ಉತ್ರಮವಾಗಿದೆ. ಆದರೆ ಲಾಕ್‍ಡೌನ್‍ನಿಂದ ಹಣ್ಣು, ತರಕಾರಿಗಳಿಗೆ ಸರಿಯಾದ ಬೆಲೆ ಸಿಕ್ಕಿಲ್ಲ. ಹೀಗಾಗಿ ಇವರ ನೆರವಿಗೂ ಧಾವಿಸಲು ಸರ್ಕಾರ ಮುಂದಾಗಿದೆ. ನಷ್ಟದ ಅಧ್ಯಯನ ನಡೆಯುತ್ತಿದ್ದು, ಇದು ಮುಗಿದ ತಕ್ಷಣ ನೆರವಿನ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.