ಚಿಕ್ಕಬಳ್ಳಾಪುರ: ಭಾರತ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ.
ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್‍ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ ಲಾಕ್‍ಡೌನ್‍ನಿಂದ ಸಡಲಿಕೆ ನೀಡಲಾಗಿದೆ. ಆದರೆ ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಆರೋಗ್ಯ ಇಲಾಖೆಯ ನಿಬಂಧನೆಗಳನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
Advertisement
Advertisement
ಪ್ರಮುಖವಾಗಿ ಬೇಕರಿ ತಿಂಡಿ ತಿನಿಸುಗಳನ್ನು ತಯಾರಿ ಹಾಗೂ ಮಾರಾಟ ಮಾಡುವ ವೇಳೆ ಕಡಿಮೆ ಕಾರ್ಮಿಕರನ್ನ ಬಳಕೆ ಮಾಡಿಕೊಳ್ಳಬೇಕು. ತಯಾರಿಕಾ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.