ನವದೆಹಲಿ: ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.
ಕ್ರಿಕೆಟ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ. ಯಾರು ಬರುತ್ತಾರೆ? ಅವರು ಎಲ್ಲಿಂದ ಬರುತ್ತಿದ್ದಾರೆ ಎನ್ನುವುದು ತಿಳಿಯುವುದು ಅಸಾಧ್ಯ. ಒಬ್ಬ ವ್ಯಕ್ತಿ ಬಂದರೂ ಹಲವು ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು ರದ್ದುಪಡಿಸುತ್ತಿದ್ದೇವೆ ಎಂದು ತಿಳಿಸಿದರು.
Advertisement
No IPL matches in #Delhi: Deputy CM Manish Sisodia#ITVideo #CoronavirusOutbreak #CoronavirusPandemic pic.twitter.com/Gg0sDdMpdy
— IndiaToday (@IndiaToday) March 13, 2020
Advertisement
ಏಕದಿನ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಐಪಿಎಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಆಯೋಜಿಸುತ್ತಾ ಎನ್ನುವುದು ಇನ್ನು ನಿರ್ಧಾರವಾಗಿಲ್ಲ.
Advertisement
ಈಗಾಗಲೇ ದೆಹಲಿ ಸರ್ಕಾರ ಸಾರ್ವಜನಿಕವಾಗಿ 200ಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ಸಮಾರಂಭವನ್ನು ನಿಷೇಧಿಸಿದ್ದು, ಶಾಲಾ, ಕಾಲೇಜು, ಸಿನಿಮಾ ಮಂದಿರಗಳು ಮಾರ್ಚ್ 31ರವರೆಗೆ ಮುಚ್ಚುವಂತೆ ಆದೇಶಿಸಿದೆ.
Advertisement
दिल्ली सरकार ने कोरोना के फैलाव को रोकने के लिए सभी sports gatherings (including IPL), बड़े सेमिनार, कोंफ़्रेंस आदि के आयोजन पर पाबंदी लगा दी है. सभी DM, SDM अपने क्षेत्रों में कोरोना सम्बन्धी आदेशों के पालन पर निगरानी रखेंगे.
हम सबको मिलकर इस ख़तरनाक वायरस को फैलने से रोकना है.
— Manish Sisodia (@msisodia) March 13, 2020