– ಸಾಮಾಜಿಕ ಅಂತರ ಕಾಯ್ದುಕೊಳ್ಳಿ
ಹಾವೇರಿ: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಹೀಗಾಗಿ ಜನರಿಗೆ ಈ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಹಿರೇಕೆರೂರು ತಾಲೂಕಿನ ಅಧಿಕಾರಿಗಳು ಹೊಸ ಪ್ಲಾನ್ ಮಾಡಿದ್ದಾರೆ.
ಔಷಧ ಖರೀದಿ, ಪಡಿತರ ಖರೀದಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳಿಗೆ ಬರುವ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಧಿಕಾರಿಗಳು ಹೊಸ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಔಷಧಿ, ಪಡಿತರ ಅಂಗಡಿ, ದಿನಸಿ ವಸ್ತುಗಳ ಅಂಗಡಿಗಳ ಮುಂದೆ ಸುಣ್ಣದಿಂದ ಬಾಕ್ಸ್ ಚಿತ್ರ ಬರೆಸಿದ್ದಾರೆ. ಅದರಲ್ಲೇ ಜನರು ನಿಂತುಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ವಸ್ತುಗಳನ್ನ ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ.
Advertisement
ಹಿರೇಕೆರೂರು ತಹಶೀಲ್ದಾರ ಆರ್.ಎಚ್.ಬಾಗವಾನ್, ಸಿಪಿಐ ಮಂಜುನಾಥ್ ಪಂಡಿತ ಮಾಡಿರುವ ಈ ಪ್ಲಾನ್‍ನಿಂದ ಪಟ್ಟಣದ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಔಷಧಿ, ಪಡಿತರ ಸೇರಿದಂತೆ ದಿನಸಿ ವಸ್ತುಗಳನ್ನ ಖರೀದಿಸಿಕೊಂಡು ಮನೆಗೆ ಹೋಗುತ್ತಿದ್ದಾರೆ.