ಬೆಂಗಳೂರು: ದೇಶಾದ್ಯಂತ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಹಿಡಿದು ಅನಗತ್ಯವಾಗಿ ಮನೆಯಿಂದ ಹೊರ ಬಂದವರಿಗೆ ಲಾಠಿ ಏಟು ಕೊಡುತ್ತಿದ್ದಾರೆ. ಇತ್ತ ವೈದ್ಯರು ಕೂಡ ಲಾಠಿ ಹಿಡಿದು ಜಾಗೃತಿ ಮೂಡಿಸಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುವಿನಲ್ಲಿ ವೈದ್ಯರು ಲಾಠಿ ಹಿಡಿದು ಜಾಗೃತಿ ಮೂಡಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಜನರಿಗೆ ಅರಿವು ಮೂಡಿಸಲು ಬೀದಿ ಬೀದಿಗೆ ವೈದ್ಯರು ತೆರಳಿದ್ದರು.
Advertisement
ತ್ಯಾಮಗೊಂಡ್ಲು ಪೊಲೀಸ್ ಇಲಾಖೆಯ ಜೊತೆಗೆ ಮುಖ್ಯ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಸೇರಿದಂತೆ ವೈದ್ಯರ ತಂಡ ಕೈಯಲ್ಲಿ ಲಾಠಿ ಹಿಡಿದು ತ್ಯಾಮಗೊಂಡ್ಲುವಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ್ದಾರೆ. ಅಲ್ಲದೇ ಪ್ರತಿಯೊಂದು ಮನೆಗೂ ತೆರಳಿ ಜನರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ತ್ಯಾಮಗೊಂಡ್ಲು ಪೊಲೀಸರ ಜೊತೆ ವೈದ್ಯರ ಜಂಟಿ ಕಾರ್ಯಾಚರಣೆ ಮಾಡಿದ್ದು, ವಿಶೇಷವಾಗಿತ್ತು.