ಬಳ್ಳಾರಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಈ ಮೊದಲು ಹೊಸಪೇಟೆ ಮೂಲದ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ಧೃಡವಾಗಿತ್ತು. ಇದೇ ಕುಟುಂಬದ ಸದಸ್ಯರಲ್ಲಿ ಒಬ್ಬರು 7 ಜನರ ಜೊತೆ ನೇರ ಸಂಪರ್ಕ ಹೊಂದಿದ್ದರು. ಹೀಗಾಗಿ ಆ ಏಳು ಜನರನ್ನು ಈಗಾಗಲೇ ಐಸೋಲೇಷನ್ ಮಾಡಲಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದನ್ನೂ ಓದಿ: ನಂಜನಗೂಡಿನಿಂದ ಬಂದ ಬಳ್ಳಾರಿಯ ಬಾಲಕನಿಗೆ ಸೋಂಕು – ರಾಜ್ಯದಲ್ಲಿ 124ಕ್ಕೆ ಏರಿಕೆ
Advertisement
Advertisement
ಇಂದು ಏಳು ಜನರ ರಕ್ತ ಪರೀಕ್ಷೆ ವರದಿ ಬಂದಿದ್ದು, ಏಳರಲ್ಲಿ ಒಬ್ಬರಿಗೆ ಸೋಂಕು ಧೃಡವಾಗಿದೆ. ಅಲ್ಲದೇ ಏಳು ಜನರು 21 ಜನರ ಜೊತೆಯಲ್ಲಿ ಸಂಪರ್ಕ ಹೊಂದಿದ್ದು, ಆ 21 ಜನರನ್ನು ಸಹ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅವರ ರಕ್ತದ ಮಾದರಿಯನ್ನು ಸಹ ಜಿಲ್ಲಾಡಳಿತ ಪರೀಕ್ಷೆಗೆ ಕಳಿಸಿದ್ದು, ರಕ್ತದ ಪರೀಕ್ಷೆಯ ವರದಿ ಬರಬೇಕಿದೆ.
Advertisement
ಆಘಾತಕಾರಿ ಅಂಶ ಅಂದರೆ ಸೋಂಕಿತ ವ್ಯಕ್ತಿಯ ಹಿರಿಯ ಮಗ ಬಳ್ಳಾರಿಯ ಹೆಸರಾಂತ ಖಾಸಗಿ ಗಣಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಒಂದು ದಿನ ಖಾಸಗಿ ಕಂಪನಿಗೆ ಹೋಗಿ ಕೆಲಸ ಮಾಡಿದ್ದಾನೆ. ಹೀಗಾಗಿ ಖಾಸಗಿ ಕಂಪನಿಯಲ್ಲಿ ಸೊಂಕು ಹರಡಿರುವ ಅನುಮಾನ ಹೆಚ್ಚಾಗಿದೆ.