– ಮಂಗ್ಳೂರಿನಲ್ಲಿ 10 ಜನರಿಗೆ ಕೊರೊನಾ ಶಂಕೆ
ಉಡುಪಿ/ಮಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ.
ಗರ್ಭಿಣಿಯನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಮೂರು ದಿನಗಳ ಹಿಂದೆ ದುಬೈನಿಂದ ಬಂದಿದ್ದರು. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶೇಷ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಲ್ಯಾಬ್‍ಗೆ ಗರ್ಭಿಣಿಯ ಗಂಟಲಿನ ದ್ರವ ರವಾನೆ ಮಾಡಲಾಗಿದೆ. ಮಾರ್ಚ್ 13 ರಂದು ದುಬೈನಿಂದ ಮಹಿಳೆ ಬಂದಿದ್ದರು ಎಂದು ಉಡುಪಿ ಡಿ.ಎಚ್.ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
Advertisement
Advertisement
ಇತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಸೋಮಾವರ ವಿದೇಶದಿಂದ ಬಂದವರಿಗೆ ಮಂಗಳೂರಿನ ಏರ್‌ಪೋರ್ಟ್ ನಲ್ಲಿ 838 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿತ್ತು. ಅದರಲ್ಲಿ 10 ಜನರಿಗೆ ಕೊರೊನಾ ಶಂಕೆ ಕಾಣಿಸಿಕೊಂಡಿದೆ. ಭಾನುವಾರ ಕಳುಹಿಸಿದ್ದ 11 ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ. ಸೋಮವಾರ 5 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
Advertisement
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಹೀಗಾಗಿ ಬೆಳಗ್ಗೆ 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆರೋಗ್ಯ ಸಚಿವರು ಆಗಮಿಸಲಿದ್ದಾರೆ. 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಕೊರೊನಾ ವೈರಸ್ ಹರಡದಂತೆ ನಿಯಂತ್ರಣ ಕ್ರಮದ ಸಭೆಯಲ್ಲಿ ಚರ್ಚಿಸಲಾಗುತ್ತದೆ. ನಂತರ ಆರೋಗ್ಯ ಸಚಿವರು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.