ಹಾಸನ: ನಾವು ಅಗತ್ಯ ವಸ್ತುಗಳನ್ನು ಕೊಳ್ಳಲು ಹೊರಗೆ ಬಂದಿದ್ದೇವೆ ಎಂದು ಸಬೂಬು ಹೇಳುತ್ತಾ ದಿನಪೂರ್ತಿ ಸುತ್ತಾಡುತ್ತಿದ್ದವರಿಗೆ ಕಡಿವಾಣ ಹಾಕಲು ಹಾಸನ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಹೊಸ ಟೈಂಟೇಬಲ್ ಸಿದ್ಧಪಡಿಸಿದೆ.
ಸಾರ್ವಜನಿಕರ ಹಿತದೃಷ್ಟಿಗೆ ಈ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಭಾನುವಾರ, ಮಂಗಳವಾರ, ಗುರುವಾರ, ಶನಿವಾರ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರಗೆ ದಿನಸಿ ಅಂಗಡಿಗಳು, ತರಕಾರಿ, ಪೇಪರ್, ಹಾಲು, ಪೆಟ್ರೋಲ್ ಬಂಕ್‍ಗಳ ಸೌಲಭ್ಯ ಪಡೆಯಬಹುದಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 8 ರವರಗೆ ಹಾಲು ಮತ್ತು ಪೇಪರ್ ಮಾತ್ರ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
Advertisement
Advertisement
ಪ್ರತಿನಿತ್ಯ ಬೆಳಗ್ಗೆಯಿಂದ ರಾತ್ರಿಯವರೆಗೆ ಮೆಡಿಕಲ್ ಸ್ಟೋರ್ ಮತ್ತು ಕ್ಲಿನಿಕ್‍ಗಳು ಓಪನ್ ಇರುತ್ತವೆ. ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ 2 ಪೆಟ್ರೋಲ್ ಬಂಕ್‍ಗಳು ಬೆಳಗ್ಗೆಯಿಂದ ರಾತ್ರಿಯವರಗೆ ಮಾತ್ರ ತೆರೆದಿರುತ್ತವೆ. ಹೋಟೆಲ್‍ಗಳ ಹೋಂ ಡೆಲಿವರಿ ಮಾತ್ರ ಅವಕಾಶ ನೀಡಲಾಗಿದೆ. ಕೆಲವರು ವಸ್ತುಗಳ ಖರೀದಿ ನೆಪದಲ್ಲಿ ಮೋಜು ಮಸ್ತಿಗಳನ್ನು ಮಾಡುತ್ತಿದ್ದು, ಅಂತವರ ಮೇಲೆ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಟೈಂಟೇಬಲ್ ಹಾಕಲಾಗಿದೆ.