– ಮಹಾರಾಷ್ಟ್ರದಲ್ಲಿ ಮತ್ತೋರ್ವ ಬಲಿ ಶಂಕೆ
– ರಾಜ್ಯದಲ್ಲಿ ಸೋಂಕಿತರೆಷ್ಟು?
ಬೆಂಗಳೂರು: ಚೀನಾ ಕಾಯಿಲೆ ದಿನದಿಂದ ದಿನಕ್ಕೆ ಭಾರತವನ್ನ ಆಕ್ರಮಿಸಿಕೊಳ್ತಿದೆ. ದೇಶದಲ್ಲಿ ಕಿಲ್ಲರ್ ಕೊರೊನಾ ಸೋಂಕಿತರ ಸಂಖ್ಯೆ 101ಕ್ಕೆ ಏರಿಕ್ಕೆ ಆಗಿದ್ದು, ಇಬ್ಬರು ಬಲಿಯಾಗಿದ್ದಾರೆ. 4 ಸಾವಿರ ಮಂದಿಯ ಮೇಲೆ ನಿಗಾ ಇಡಲಾಗಿದೆ.
Advertisement
ಮಹಾರಾಷ್ಟ್ರದಲ್ಲಿ ಮತೋರ್ವ ಕೊರೊನಾಗೆ ಸಾವನ್ನಪ್ಪಿರುವ ಶಂಕೆ ಇದೆ. ತೆಲಂಗಾಣ, ಛತ್ತೀಸ್‍ಗಢ, ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲಾಗಿದೆ. ಭಾರತ-ಬಾಂಗ್ಲಾದೇಶ, ಭಾರತ-ನೇಪಾಳ, ಭಾರತ-ಭೂತಾನ್, ಭಾರತ-ಮ್ಯಾನ್ಮಾರ್ ಗಡಿ ಕೂಡ ಏಪ್ರಿಲ್ 16 ವರೆಗೂ ಬಂದ್ ಮಾಡಿ ಆದೇಶ ಹೊರಡಿಸಲಾಗಿದ್ದು, ರಾಜತಾಂತ್ರಿಕರು, ಅಧಿಕಾರಿಗಳಿಗೆ ಮಾತ್ರ ಗಡಿ ದಾಟುವ ಅವಕಾಶ ಮಾಡಿಕೊಡಲಾಗಿದೆ.
Advertisement
Advertisement
ಕೊರೊನಾ ಟೆಸ್ಟ್ ಗೆ ಹೆದರಿ ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕದ ದಂಪತಿ ಕೊಚ್ಚಿ ಏರ್‍ಪೋರ್ಟಿನಲ್ಲಿ ಪತ್ತೆಯಾಗಿದ್ದು, ಮತ್ತೆ ವಿಶೇಷ ವಾರ್ಡ್‍ಗೆ ಶಿಫ್ಟ್ ಮಾಡಿ, ಪರೀಕ್ಷೆಗೆ ಒಳಪಡಿಸಲಾಗಿದೆ. ಈ ನಡುವೆ ಭಾರತೀಯ ರೈಲ್ವೆ ಇಲಾಖೆ ಕೂಡ ಮುನ್ನೆಚ್ಚರಿಕೆ ವಹಿಸಿದ್ದು, ವೈರಸ್ ಹರಡುವ ಭೀತಿಯಿಂದ ತನ್ನ ಪ್ರಯಾಣಿಕರಿಗೆ ಬೆಡ್‍ಶೀಟ್, ಕಾಟನ್ಸ್ ಕೊಡದಿರಲು ನಿರ್ಧರಿಸಿದೆ. ಇದನ್ನೂ ಓದಿ: ಇಟಲಿ, ಡೆನ್ಮಾರ್ಕ್ ಬಳಿಕ ಕುವೈತ್ ಸಂಪೂರ್ಣ ಬಂದ್
Advertisement
ಕೊರೊನಾ ವಿರುದ್ಧ ಹೋರಾಡಲು ಸಾರ್ಕ್ ಮೂಲಕ ಕಾರ್ಯತಂತ್ರ ರೂಪಿಸಬೇಕೆಂಬ ಪ್ರಧಾನಿ ಮೋದಿ ಕರೆಗೆ ಪಾಕಿಸ್ತಾನ ಸೇರಿ ಎಲ್ಲಾ ರಾಷ್ಟ್ರಗಳು ಒಗ್ಗೂಡಿವೆ. ಇಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾರ್ಕ್ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. ಕೊರೊನಾ ಸೋಂಕು ವ್ಯಾಪಕವಾಗ್ತಿದ್ದಂತೆ ಪರೀಕ್ಷೆಗೆ ಒಳಗಾಗಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್ ನೆಗೆಟಿವ್ ಬಂದಿದೆ ಎಂದು ವೈಟ್‍ಹೌಸ್ ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ
ಕರ್ನಾಟಕದಲ್ಲಿ ಕೊರೊನಾ ಶಂಕಿತರು:
ಬೆಂಗಳೂರಲ್ಲಿ 9 ಮಂದಿ, ಹಾಸನದಲ್ಲಿ ನಾಲ್ವರು, ದಕ್ಷಿಣ ಕನ್ನಡದಲ್ಲಿ 7 ಮಂದಿ, ಕಲಬುರಗಿಯಲ್ಲಿ ನಾಲ್ವರು, ಉಡುಪಿಯಲ್ಲಿ ಇಬ್ಬರು, ಬಳ್ಳಾರಿಯಲ್ಲಿ ಓರ್ವ, ಚಿಕ್ಕಮಗಳೂರಿನಲ್ಲಿ ಇಬ್ಬರು, ಕೊಡಗಿನಲ್ಲಿ ಓರ್ವ ಹಾಗೂ ಬೀದರ್ ನಲ್ಲಿ ಇಬ್ಬರ ಮೇಲೆ ಕೊರೊನಾ ಶಂಕೆ ವ್ಯಕ್ತವಾಗಿದೆ.