ನವದೆಹಲಿ: ಸರಿಯಾದ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್‌ನ ಕರ್ತವ್ಯ. ಮಳೆ ನೀರು ಮನೆಗೆ ನುಗ್ಗಿ, ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ ಬೀಸಿ 9 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.
2010 ರಲ್ಲಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಚರಂಡಿ ನೀರು ಮನೆಗೆ ನುಗ್ಗಿ ಅಪಾರ ನಷ್ಟವಾಗಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಕರ್ತವ್ಯ ಲೋಪ ಪ್ರಶ್ನಿಸಿ ಲೀಲಾ ಮಾಥುರ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement
Advertisement
ಪಶ್ಚಿಮ ದೆಹಲಿಯಲ್ಲಿ ತಮ್ಮ ಮನೆ ನಿರ್ಮಿಸಿದಾಗ ಅದು ರಸ್ತೆಯ ಮಟ್ಟದಲ್ಲಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹಲವು ಬಾರಿ ರಸ್ತೆ ಪುನರ್‌ನಿರ್ಮಾಣದ ನಂತರ ರಸ್ತೆಯ ಮಟ್ಟವು ಏರಿ, ಮನೆ ತಗ್ಗು ಪ್ರದೇಶದಲ್ಲಿ ಉಳಿಯುವಂತೆ ಅಧಿಕಾರಿಗಳು ಮಾಡಿದ್ದಾರೆ. ಇದರಿಂದ ಮಾನ್ಸೂನ್ ಮಳೆಯ ವೇಳೆ ಮನೆಗೆ ನೀರು ನುಗ್ಗಿದೆ. ಸಮಸ್ಯೆಯನ್ನು ಪರಿಹರಿಸಲು ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: SC-ST ಗ್ರಾಹಕರಿಗೆ ಉಚಿತ ವಿದ್ಯುತ್ ಅನುಷ್ಠಾನಕ್ಕೆ ಹೊಸ ಆ್ಯಪ್
Advertisement
ಇದಕ್ಕೆ ಪ್ರತಿವಾದ ಮಂಡಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ನೀರಿನ ಚರಂಡಿಗಳು ಮುಚ್ಚಿಹೋಗಿರುವುದರಿಂದ ಎಂಸಿಡಿಯಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕರ್ತವ್ಯ ನಿರ್ವಹಿಸುವಲ್ಲಿ ಶೋಚನೀಯವಾಗಿ ಸಂಸ್ಥೆ ವಿಫಲವಾಗಿದೆ. ಒಂದರ ಮೇಲೊಂದರಂತೆ ರಸ್ತೆಗಳನ್ನು ಹಾಕಿದ್ದು, ಇದು ರಸ್ತೆಗಳ ಎತ್ತರವನ್ನು ಹೆಚ್ಚಿಸಿದೆ. ಎಂಸಿಡಿಯು ಈ ಪ್ರದೇಶದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಮಳೆ ನೀರಿನ ಚರಂಡಿಗಳಿವೆ ಎಂದು ಖಚಿತಪಡಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದೆ.
Advertisement
ಪ್ರಕರಣ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿ ಸದಸ್ಯ ಪೀಠ, ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಖರ ಉದ್ದೇಶಕ್ಕಾಗಿ ರಚಿತವಾದ ಮುನ್ಸಿಪಲ್ ಕಾರ್ಪೊರೇಷನ್ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಎಂಸಿಡಿ ತನ್ನ ಕಾರ್ಯವೈಖರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದರಿಂದ, ಮೇಲ್ಮನವಿದಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು. ಹೀಗಾಗಿ ಪರಿಹಾರ ಹಣವನ್ನು 3 ಲಕ್ಷದಿಂದ 9 ಲಕ್ಷ ರೂ.ಗೆ ಏರಿಸಬೇಕು ಎಂದು ಕೋರ್ಟ್ ಆದೇಶ ನೀಡಿತು. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!