ಬೆಂಗಳೂರು: ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಸಚಿವ ಕೃಷ್ಣ ಬೈರೇಗೌಡರ (Krishna Byregowda) ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ತಲೆ ಎಣಿಕೆ ಪಾಲಿಟಿಕ್ಸ್ – ಸಿಎಂ ಸ್ಥಾನಕ್ಕಲ್ಲ.. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ?
ಭ್ರಷ್ಟಾಚಾರ ಆರೋಪದಡಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದು, ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಉಲ್ಲೇಖಿಸಿದ್ದಾರೆ.
ದೊಡ್ಡಬಳ್ಳಾಪುರದ ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ವೇ ನಂಬರ್ 150ರಲ್ಲಿರುವ ಜಮೀನನ್ನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಪಲ್ಟಿತ್ ಡೆವಲಪರ್ಸ್ ಎಲ್‌ಎಲ್‌ಪಿ ಕಂಪನಿಗೆ ಮಾರಾಟ ಮಾಡಲಾಗಿದ್ದು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ದಕ್ಷಿಣದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರಾಮಹೋತ್ಸವ – ರಥೋತ್ಸವಕ್ಕೆ ಭಕ್ತರ ದಂಡು